ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ – ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಣೆ!

ಅಹಮದಾಬಾದ್​ ವಿಮಾನ ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ಮೋದಿ ಇಂದು ಭೇಟಿ ನೀಡಿ ಘಟನಾ ಸ್ಥಳವನ್ನ ಪರಿಶೀಲನೆ ನಡೆಸಿದ್ದಾರೆ. ವಿಮಾನದ ಇಂಧನವು ದುರ್ಘಟನಾ ಸ್ಥಳದಲ್ಲಿ ಸೋರಿಕೆಯಾಗಿದೆ. ಇದ್ರಿಂದ ಮತ್ತೆ ಯಾವುದಾದ್ರು ದುರ್ಘಟನೆ ಸಂಭವಿಸೋ ಅನುಮಾನ ಇದೆ.

ಈ ಹಿನ್ನೆಲೆಯಲ್ಲಿ ಸುರಕ್ಷತಾ ಕಾರಣಗಳಿಂದಾಗಿ ಭದ್ರತಾ ದೃಷ್ಟಿಯಿಂದ ಹೆಚ್ಚಿನ ಹೊತ್ತು ದುರಂತ ಸ್ಥಳದಲ್ಲಿ ನಿಲ್ಲದಂತೆ ಭದ್ರತಾ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು. ಹೀಗಾಗಿ ಪ್ರಧಾನಿ ಮೋದಿ 10 ನಿಮಿಷಗಳ ಕಾಲ ಘಟನಾ ಸ್ಥಳವನ್ನು ಪರಿಶೀಲಿಸಿ ಹಿಂತಿರುಗಿದರು.

ಘಟನಾ ಸ್ಥಳ ಪರಿಶೀಲನೆ ನಡೆಸಿದ್ದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ, ಸಿವಿಲ್​ ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಹಮದಾಬಾದ್​ನಲ್ಲಿ ನಡೆದ ಏರ್​ ಇಂಡಿಯಾ ದುರಂತದಲ್ಲಿ ಪ್ರಯಾಣಿಕರು, ಸಿಬ್ಬಂದಿ, ಹಾಗೂ ಮೆಡಿಕಲ್ ​ಕಾಲೇಜಿನ ವಿದ್ಯಾರ್ಥಿಗಳು ಸೇರಿ ಒಟ್ಟು 265 ಜನರು ಜೀವ ಕಳೆದುಕೊಂಡಿದ್ದಾರೆ. ಆದರೆ ವಿಮಾನದಲ್ಲಿದ್ದ ಓರ್ವ ವ್ಯಕ್ತಿ , ಹಾಸ್ಟೆಲ್​ನಲ್ಲಿದ್ದ ಉಳಿದ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವ್ರಿಗೆಲ್ಲಾ ಸಿವಿಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಅಂದಹಾಗೆ ವಿಮಾನದಲ್ಲಿ ಒಟ್ಟು 242 ಪ್ರಯಾಣಿಕರು ಇದ್ದರು. ಅವರಲ್ಲಿ ವಿಶ್ವಾಸ್​ ಕುಮಾರ್ ರಮೇಶ್ ಅನ್ನೋರು ವಿಮಾನ ಪತನ ಆಗುತ್ತಿದ್ದಂತೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಇನ್ನುಳಿದ 241 ಪ್ರಯಾಣಿಕರು ಅಲ್ಲೇ ಜೀವ ಬಿಟ್ಟಿದ್ದಾರೆ. ಬೋಯಿಂಗ್ ವಿಮಾನ ಹಾಸ್ಟೆಲ್​ ಮೇಲೆ ಬಿದ್ದಿದ್ದರಿಂದ 24 ಮೆಡಿಕಲ್ ವಿದ್ಯಾರ್ಥಿಗಳು ಕೂಡ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ : ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲಿಗೆ – ಕೋರ್ಟ್​​ಗೆ ಶರಣಾಗ್ತಿದ್ದಂತೆ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಿರುವ ಸಿಬಿಐ!

Btv Kannada
Author: Btv Kannada

Read More