ಚಿಕ್ಕಬಳ್ಳಾಪುರ : ಬೆಂಗಳೂರು ಸಮೀಪದ ಗಿರಿಧಾಮ, ಪ್ರವಾಸಿಗರ ನೆಚ್ಚಿನ ತಾಣ ನಂದಿಬೆಟ್ಟಕ್ಕೆ ಜೂ.16 ರಿಂದ 3 ದಿನ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ರಾಜ್ಯ ಸಚಿವ ಸಂಪುಟದ 2025ನೇ ಸಾಲಿನ 13ನೇ ಸಭೆಯನ್ನು ಜೂನ್ 19 ರಂದು ತಾಲೂಕಿನ ನಂದಿ ಗಿರಿಧಾಮದಲ್ಲಿ ಹಮ್ಮಿಕೊಂಡಿರುವುದರ ಪ್ರಯುಕ್ತ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 16ರ ಸಂಜೆ 6 ಗಂಟೆಯಿಂದ ಜೂನ್ 20ರ ಬೆಳಿಗ್ಗೆ 5 ಗಂಟೆಯವರೆಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಿ ಆದೇಶಿಸಲಾಗಿದೆ.
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಆಗಮಿಸುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 16ರ ಸಂಜೆ 6 ಗಂಟೆಯಿಂದ ಜೂನ್ 20ರ ಬೆಳಿಗ್ಗೆ 5 ಗಂಟೆಯವರೆಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಿ ಆದೇಶಿಸಲಾಗಿದೆ.
ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ ಹಾಗೂ ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 16 ರ ಸಂಜೆ 6 ಗಂಟೆಯಿಂದ ಜೂನ್ 20 ರ ಬೆಳಿಗ್ಗೆ 5 ಗಂಟೆಯವರೆಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಿ ಆದೇಶಿಸಲಾಗಿದೆ.
ಇದನ್ನೂ ಓದಿ : ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ ಬ್ಲಾಕ್ ಬಾಕ್ಸ್ ಪತ್ತೆ.. ಏನಿದು? ತನಿಖೆಯಲ್ಲಿ ಹೇಗೆ ನೆರವಾಗುತ್ತೆ ಗೊತ್ತಾ?
