ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಗೃಹ ಸಚಿವ ಡಾ.ಜಿ ಪರಮೇಶ್ವ‌ರ್!

ಉಡುಪಿ : ಮಂಗಳೂರಿನಲ್ಲಿ ನಿನ್ನೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವ‌ರ್ ಅವರು ರಾತ್ರಿ ವೇಳೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿಗೆ ಭೇಟಿ ನೀಡಿ ವಾಸ್ತವ್ಯ ಹೂಡಿದ್ದು, ಇಂದು ಬೆಳಗ್ಗೆ ಶ್ರೀ ಮೂಕಾಂಬಿಕಾ ಕ್ಷೇತ್ರದಲ್ಲಿ ಮೂಕಾಂಬಿಕೆಯ ದರ್ಶನ ಪಡೆದು ದೇವಳದಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

ಈ ಸಂದರ್ಭ ಕ್ಷೇತ್ರದ ಪ್ರಧಾನ ಅರ್ಚಕ ನರಸಿಂಹ ಅಡಿಗ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಗೃಹ ಸಚಿವರ ಜತೆ ಮೀನುಗಾರಿಕೆ ಮತ್ತು ಬಂದರು ಖಾತೆಯ ಸಚಿವ ಮಂಕಾಳ್ ವೈದ್ಯ ಅವರೂ ಇದ್ದರು.

ಇನ್ನು, ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಸಚಿವರಿಗೆ ಸಾಥ್ ನೀಡಿದರು. ಮೂಕಾಂಬಿಕಾ ದೇವಿಯ ಭಕ್ತರಾಗಿರುವ ಡಾ. ಜಿ. ಪರಮೇಶ್ವರ್ ಕರಾವಳಿ ಜಿಲ್ಲೆಗಳ ಭೇಟಿ ಸಂದರ್ಭದಲ್ಲಿ ಬಹುತೇಕವಾಗಿ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡುತ್ತಿರುತ್ತಾರೆ.

ಇದನ್ನೂ ಓದಿ : ಮತ್ತೆ ಗೋಮಾತೆಯ ಕೆಚ್ಚಲು ಕೊಯ್ದ ದುಷ್ಟರು – ಬಾಗಲಕೋಟೆಯಲ್ಲಿ ಹೃದಯ ವಿದ್ರಾವಕ ಘಟನೆ!

Btv Kannada
Author: Btv Kannada

Read More