ಶಿವಮೊಗ್ಗ : ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ.
ಮುಂಗಾರು ಮಳೆ ಹಿನ್ನೆಲೆ ಜೂನ್ 15ರಿಂದ, ಅಂದರೆ ನಾಳೆಯಿಂದ ಸೆಪ್ಟೆಂಬರ್ 30ರವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಹೀಗಾಗಿ ನಾಳೆಯಿಂದ ಬರೋಬ್ಬರಿ ಮೂರುವರೆ ತಿಂಗಳುಗಳ ಕಾಲ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳು ಓಡಾಡುವುದಿಲ್ಲ.
ಆಗುಂಬೆ ಘಾಟಿ 169ಎ ಹೆದ್ದಾರಿ ರಸ್ತೆಯಲ್ಲಿ ಸಂಚಾರ ಬಂದ್ ಮಾಡಲಾಗಿದ್ದು, ಭಾರೀ ವಾಹನಗಳ ಓಡಾಟಕ್ಕೆ ಜಿಲ್ಲಾಧಿಕಾರಿ ನಿಷೇಧ ಹೇರಿದ್ದಾರೆ. ಮಲ್ಪೆ–ಆಗುಂಬೆ ಹೆದ್ದಾರಿ ರಸ್ತೆಯಾಗಿರುವ ಆಗುಂಬೆ ಘಾಟಿಯಲ್ಲಿ ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶಿಸಿದ್ದಾರೆ.
ಬದಲಿ ಮಾರ್ಗ ಯಾವುದು? ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿದ್ದು, ಆಗುಂಬೆ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ.
ಇದನ್ನೂ ಓದಿ : ವಿನೋದ್ ಪ್ರಭಾಕರ್ ನಟನೆಯ ‘ಮಾದೇವ’ ಸಿನಿಮಾ ಫ್ಲಾಪ್ – ಥಿಯೇಟರ್ನಿಂದ ಎತ್ತಗಂಡಿ.. ಪ್ರೊಡ್ಯೂಸರ್ಗೆ ಭಾರೀ ಲಾಸ್!
