ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಈ ಚಿತ್ರದ ಶೂಟಿಂಗ್ ಆರಂಭ ಮಾಡಿದಾಗಿನಿಂದಲೂ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಇದೀಗ ಮತ್ತೊಂದು ಅಪಘಾತ ಸಿನಿಮಾ ಸೆಟ್ನಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಬೋಟ್ ಒಂದು ಮಗುಚಿ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿರುವ ಮಾಸ್ತಿಕಟ್ಟೆ ಮಾಣಿ ಜಲಾಶಯದಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ನಡೆಯುತ್ತಿತ್ತು. ಇದೇ ವೇಳೆ ಏಕಾಏಕಿ ದೋಣಿ ಮಗುಚಿ ಬಿದ್ದಿದೆ.
ಇನ್ನೂ, ಮಗುಚಿ ಬಿದ್ದ ದೋಣಿಯಲ್ಲಿ ನಟ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು ಇದ್ದರು. ಆದ್ರೆ ದಿಢೀರ್ ಅಂತ ಬೋಟು ಮಗುಚಿದ್ದರಿಂದ ಕಲಾವಿದರು ಹಾಗೂ ತಂತ್ರಜ್ಞರು ಈಜುತ್ತಲೇ ದಡ ಸೇರಿದ್ದಾರೆ. ಆದ್ರೆ ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಜೀವ ಹಾನಿ ಆಗಿಲ್ಲ. ಆದರೆ ಕ್ಯಾಮೆರಾ ಇನ್ನಿತರೆ ಸೆಟ್ ಪ್ರಾಪರ್ಟಿಗಳು ನೀರು ಪಾಲಾಗಿವೆ. ಈ ಘಟನೆಯಿಂದಾಗಿ ‘ಕಾಂತಾರ: ಚಾಪ್ಟರ್ 1’ ಚಿತ್ರತಂಡ ಆತಂಕಕ್ಕೆ ಒಳಗಾಗಿದ್ದಾರೆ.
ಇದನ್ನೂ ಓದಿ : ಕನ್ನಡದಲ್ಲಿ ಉತ್ತರಿಸಿದ ಉಪನ್ಯಾಸಕನ ಕೆಲಸಕ್ಕೆ ಕುತ್ತು – ಕನ್ನಡಿಗರ ಆಕ್ರೋಶದ ಬೆನ್ನಲ್ಲೇ ರಾಜೀನಾಮೆ ರದ್ದುಪಡಿಸಿದ ಆರ್ವಿ ಕಾಲೇಜು!

Author: Btv Kannada
Post Views: 158