ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ – ಟಿಪ್ಪರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು!

ಚಿಕ್ಕಬಳ್ಳಾಪುರ : ಬೈಕ್-ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಯಲಗಲಹಳ್ಳಿ ಕ್ರಷರ್ ಝೋನ್‌ನಲ್ಲಿ ನಡೆದಿದೆ. 40 ವರ್ಷದ ವೆಂಕಟೇಶ್ ಮೃತ ದುರ್ದೈವಿ.

ಕಸುವುಗುಟ್ಟಹಳ್ಳಿ ಗ್ರಾಮದ ನಿವಾಸಿ ಕ್ರಷರ್‌ನ ರೈಟರ್ ಆಗಿದ್ದ ವೆಂಕಟೇಶ್ ಪೇಟೆಯಿಂದ ಹಿಂತಿರುಗುವಾಗ ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಟಿಪ್ಪರ್ ಹರಿದ ಪರಿಣಾಮ ಮರ್ಮಾಂಗಕ್ಕೆ ಗಂಭೀರವಾದ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೇರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ರಾಜ್ಯದಲ್ಲಿ 17 ತಹಶೀಲ್ದಾರ್​ಗಳ ವರ್ಗಾವಣೆ – ಯಾರು, ಎಲ್ಲಿಗೆ? ಇಲ್ಲಿದೆ ಸಂಪೂರ್ಣ ಪಟ್ಟಿ!

Btv Kannada
Author: Btv Kannada

Read More