Download Our App

Follow us

Home » ಸಿನಿಮಾ » ಅರ್ಜುನ ಅವಧೂತ ಗೂರುಜಿಯನ್ನು ಭೇಟಿಯಾದ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರತಂಡ..!

ಅರ್ಜುನ ಅವಧೂತ ಗೂರುಜಿಯನ್ನು ಭೇಟಿಯಾದ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರತಂಡ..!

ಅಭಿಮನ್ಯು ಕಾಶೀನಾಥ್ ಅಭಿನಯದ `ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದೇ ಹೊತ್ತಿನಲ್ಲಿ ಅಭಿಮನ್ಯು ಕಾಶೀನಾಥ್ ಚಿತ್ರತಂಡದೊಂದಿಗೆ ಮೈಸೂರಿನ ಅವಧೂತ ಅರ್ಜುನ್ ಗುರೂಜಿಯನ್ನು ಭೇಟಿಯಾಗಿದ್ದಾರೆ. ಅವರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ. ಅರ್ಜುನ್ ಗುರೂಜಿ ಅಭಿಮನ್ಯು ಸೇರಿದಂತೆ ಒಂದಿಡೀ ಚಿತ್ರತಂಡಕ್ಕೆ ಒಳಿತಾಗಲಿ, ಈ ಸಿನಿಮಾ ಇನ್ನಷ್ಟು ಯಶ ಕಾಣಲೆಂದು ಆಶೀರ್ವಾದ ಮಾಡಿದ್ದಾರೆ.

ಅವಧೂತ ಅರ್ಜುನ್ ಗುರೂಜಿ ಅವರ ನಿವಾಸಕ್ಕೆ ಚಿತ್ರತಂಡದೊಂದಿಗೆ ತೆರಳಿದ್ದ ಅಭಿಮನ್ಯು ಕಾಶೀನಾಥ್, ತಮ್ಮ ತಂದೆ ಕಾಶೀನಾಥ್ ಅವರ ಹೆಸರು ಅಜರಾಮರವಾಗಲೆಂದು ಬೇಡಿಕೊಂಡಿದ್ದಾರೆ. ನಂತರ ಆಶೀರ್ವಚನ ನೀಡಿದ ಅವಧೂತ ಅರ್ಜುನ್ ಗುರೂಜಿ ಈ ಸಿನಿಮಾ ಸಂಪೂರ್ಣವಾಗಿ ಯಶಸ್ಸು ಗಳಿಸಲೆಂದು ಹಾರೈಸುತ್ತಲೇ, ಯುವ ನಟ ಅಭಿಮನ್ಯು ಕಾಶೀನಾಥ್ ತಮ್ಮ ಸಿನಿಮಾಗಳ ಮೂಲಕ ಯುವ ಜನತೆಗೆ ಉತ್ತಮ ಸಂದೇಶಗಳನ್ನು ದಾಟಿಸವಂತಾಗಲೆಂದೂ ಹರಸಿದ್ದಾರೆ. ಈ ಸಂದರ್ಭದಲ್ಲಿ ನಾಯಕ ನಟ ಅಭಿಮನ್ಯು ಕಾಶೀನಾಥ್ ಅವರೊಂದಿಗೆ ನಾಯಕಿ ಸ್ಫೂರ್ತಿ ಉಡಿಮನೆ, ನಿರ್ದೇಶಕ ಕಿರಣ್ ಎಸ್ ಸೂರ್ಯ ಮತ್ತು ಚಿತ್ರತಂಡ ಭಾಗಿಯಾಗಿತ್ತು.

ಇನ್ನು  ಸೂಕ್ಷ್ಮ ಕಥಾನಕವನ್ನೊಳಗೊಂಡಿರುವ ಎಲ್ಲಿಗೆ ಪಯಣ ಯಾವುದೋ ದಾರಿ ಚಿತ್ರ ದಿನದಿಂದ ದಿನಕ್ಕೆ ಉತ್ತಮ ಪ್ರದರ್ಶನ ನೀಡುತ್ತಿದೆ. ನಾಯಕ ಅಭಿಮನ್ಯು ಕಾಶೀನಾಥ್ ಈ ಸಿನಿಮಾವನ್ನು ಮತ್ತಷ್ಟು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಚಿತ್ರತಂಡದೊಂದಿಗೆ ಸಕ್ರಿಯರಾಗಿದ್ದಾರೆ. ಇದರ ನಡುವಲ್ಲಿಯೇ ಅವಧೂತ ಅರ್ಜುನ್ ಗುರೂಜಿಯನ್ನು ಭೇಟಿಯಾಗುವ ಮೂಲಕ ಆಧ್ಯಾತ್ಮಿಕ ಅನುಭೂತಿಯೊಂದಿಗೆ ಮತ್ತಷ್ಟು ಹುರುಪು ತುಂಬಿಕೊಂಡಿದ್ದಾರೆ.

ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯೊಂದಿಗೆ ಕಿರಣ್ ಎಸ್ ಸೂರ್ಯ ನಿರ್ದೇಶನ ಮಾಡಿದ್ದಾರೆ. ಅಭಿಮನ್ಯು ಕಾಶಿನಾಥ್ ಅವರಿಗೆ ಸ್ಫೂರ್ತಿ ಉಡಿಮನೆ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ವಿಜಯಶ್ರೀ ಕಲಬುರ್ಗಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಬಲ ರಾಜವಾಡಿ, ಶೋಭನ್, ಅಯಾಂಕ್, ರಿನಿ ಬೋಪಣ್ಣ, ಪ್ರದೀಪ್, ರವಿತೇಜ, ಕಿಶೋರ್, ಅಶ್ವಿನಿ ರಾವ್, ಪ್ರಿಯಾ ಮುಂತಾದವರ ತಾರಾಗಣವಿದೆ. ಪ್ರಣವ್ ರಾವ್ ಸಂಗೀತ ನಿರ್ದೇಶನ, ಸತ್ಯ ರಾಮ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಮೋದ್ ಮರವಂತೆ ಸಾಹಿತ್ಯವಿದೆ.

ಇದನ್ನೂ ಓದಿ : ಬಹುಕಾಲದ ಸಂಬಂಧಕ್ಕೆ ಬ್ರೇಕ್​ ಹಾಕಿದ ಬಿಗ್​ಬಾಸ್ ಖ್ಯಾತಿಯ ಜಯಶ್ರೀ ಆರಾಧ್ಯ-ಸ್ಟೀವನ್‌? 

Leave a Comment

DG Ad

RELATED LATEST NEWS

Top Headlines

ವಕ್ಫ್​​ ಭೂ ಬಿರುಗಾಳಿ ಎದ್ದಿರೋ ವಿಜಯಪುರಕ್ಕೆ ನಾಳೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಭೇಟಿ..!

ವಿಜಯಪುರ : ಕಳೆದ ಕೆಲ ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಅನೇಕ ರೈತರ ಜಮೀನುಗಳಿಗೆ ವಕ್ಫ್ ಮಂಡಳಿ ನೋಟಿಸ್

Live Cricket

Add Your Heading Text Here