Download Our App

Follow us

Home » ರಾಜ್ಯ » ಏರ್‌ಪೋರ್ಟ್‌ನಲ್ಲಿ ಮಹಿಳಾ SIT ಅಧಿಕಾರಿಗಳಿಂದ ಪ್ರಜ್ವಲ್‌ ಅರೆಸ್ಟ್‌ – ಕಾರಣವೇನು?

ಏರ್‌ಪೋರ್ಟ್‌ನಲ್ಲಿ ಮಹಿಳಾ SIT ಅಧಿಕಾರಿಗಳಿಂದ ಪ್ರಜ್ವಲ್‌ ಅರೆಸ್ಟ್‌ – ಕಾರಣವೇನು?

ಬೆಂಗಳೂರು : ಅತ್ಯಾಚಾರ, ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್​ ರೇವಣ್ಣ ಅರೆಸ್ಟ್​ ಆಗಿದ್ದಾರೆ. ಬರೋಬ್ಬರಿ 34 ದಿನಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್​ ರೇವಣ್ಣ ಬೆಂಗಳೂರು ಏರ್​ಪೋರ್ಟ್​ಗೆ ಬಂದಿಳಿಯುತ್ತಿದ್ದಂತೆ SIT ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಆರೋಪಿ ಪ್ರಜ್ವಲ್​ನನ್ನು ಮಹಿಳಾ ಎಸ್​ಐಟಿ ಅಧಿಕಾರಿಗಳ ಮೂಲಕ ಬಂಧಿಸಲಾಗಿದ್ದು, ಅದು ಯಾಕೆ ಎಂಬ ಮಾಹಿತಿ ಇಲ್ಲಿದೆ.

ಜೀಪ್‌ ಚಾಲಕ ಹೊರತು ಪಡಿಸಿದರೆ ಉಳಿದವರೆಲ್ಲಾ ಮಹಿಳಾ ಅಧಿಕಾರಿಗಳು ಪ್ರಜ್ವಲ್ ಬಂಧನ ಸಂದರ್ಭದಲ್ಲಿದ್ದರು. ಇದು ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪ ಪ್ರಕರಣವಾಗಿದ್ದರಿಂದ ಸಂತ್ರಸ್ತ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಈ ಪ್ರಕರಣದ ಕುರಿತು ಸಂತ್ರಸ್ತೆಯರು ಮುಜುಗರಕ್ಕೆ ಒಳಗಾಗಬಾರದು ಎಂಬ ಕಾರಣಕ್ಕೆ ಮಹಿಳಾ ತಂಡವನ್ನು ಅಧಿಕಾರಿಗಳು ನೇಮಿಸಿದ್ದರು.

ಇನ್ನು ಹೆಣ್ಣನ್ನು ಕೇವಲವಾಗಿ ನೋಡಿದ ಆರೋಪಿ ಪ್ರಜ್ವಲ್​ಗೆ ಮುಜುಗರ ಉಂಟುಮಾಡುವ ನಿಟ್ಟಿನಲ್ಲಿ ಈ ರೀತಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಬೇಕು. ನಾವಿದ್ದೇವೆ ಧೈರ್ಯವಾಗಿ ಬಂದು ದೂರು ನೀಡುವಂತೆ ಸಂದೇಶ ರವಾನಿಸಬೇಕು ಎಂಬ ಕಾರಣಕ್ಕೆ ಮಹಿಳಾ ಅಧಿಕಾರಿಗಳಿಂದ ಎಸ್‌ಐಟಿ ಪ್ರಜ್ವಲ್​ನ್ನು ಬಂಧಿಸಿದೆ.

ಇದನ್ನೂ ಓದಿ : ರೇವಣ್ಣ ಕುಟುಂಬಕ್ಕಿಂದು ನಿರ್ಣಾಯಕ ದಿನ – ಅಪ್ಪ, ಅಮ್ಮ, ಮಗನ ಬೇಲ್​ ಭವಿಷ್ಯ ಇಂದೇ ನಿರ್ಧಾರ..!

 

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here