Download Our App

Follow us

Home » ಕ್ರೀಡೆ » ಏಷ್ಯಾಕಪ್ : ಇಂದು ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಕದನ – ಪಂದ್ಯ ಎಷ್ಟು ಗಂಟೆಗೆ? ಉಚಿತವಾಗಿ ನೋಡುವುದೇಗೆ?

ಏಷ್ಯಾಕಪ್ : ಇಂದು ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಕದನ – ಪಂದ್ಯ ಎಷ್ಟು ಗಂಟೆಗೆ? ಉಚಿತವಾಗಿ ನೋಡುವುದೇಗೆ?

ಶ್ರೀಲಂಕಾ : 2024ರ ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಗೆ ಇಂದು ಅದ್ದೂರಿ ಚಾಲನೆ ಸಿಗಲಿದೆ. ಶ್ರೀಲಂಕಾದಲ್ಲಿ ನಡೆಯಲಿರುವ ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಯುಎಇ ಮತ್ತು ನೇಪಾಳ ತಂಡಗಳು ಮುಖಾಮುಖಿಯಾಗಲಿದೆ. ಮಧ್ಯಾಹ್ನ 2 ಗಂಟೆಗೆ ಮೊದಲ ಪಂದ್ಯ ನಡೆಯಲಿದ್ದು, ರಾತ್ರಿ 7 ಗಂಟೆಗೆ ಆರಂಭವಾಗುವ ಎರಡನೇ ಪಂದ್ಯದಲ್ಲಿ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಕದನ ನಡೆಯಲಿದೆ.

ದಂಬುಲ್ಲಾದ ರಂಗಿರಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತ ತಂಡ ಸೆಣೆಸಲು ಸಜ್ಜಾಗಿದೆ. ಹಾಲಿ ಚಾಂಪಿಯನ್ ಆಗಿರುವ ಭಾರತ, ಈ ಬಾರಿ ಕೂಡ ಕಪ್ ಗೆಲ್ಲುವ ಫೇವರಿಟ್​ ತಂಡವಾಗಿದೆ. ಮತ್ತೊಂದೆಡೆ ಹಾಲಿ ಚಾಂಪಿಯನ್ನರಿಗೆ ಸವಾಲು ಹಾಕಲು ಪಾಕಿಸ್ತಾನ ಕೂಡ ಸಜ್ಜಾಗಿದೆ. ಇನ್ನು ಈವರೆಗೆ ಟಿ20 ಕ್ರಿಕೆಟ್​ನಲ್ಲಿ ಭಾರತ-ಪಾಕಿಸ್ತಾನ ಮಹಿಳಾ ತಂಡಗಳು 13 ಬಾರಿ ಮುಖಾಮುಖಿಯಾಗಿವೆ. ಇದ್ರಲ್ಲಿ ಭಾರತ 10 ಪಂದ್ಯ ಗೆದ್ದು ಪ್ರಾಬಲ್ಯ ಸಾಧಿಸಿದೆ. ಪಾಕಿಸ್ತಾನ ಕೇಲವ 3 ಪಂದ್ಯವಷ್ಟೇ ಗೆದ್ದಿದೆ.

ಮೊಬೈಲ್​ನಲ್ಲಿ ಉಚಿತವಾಗಿ ಪಂದ್ಯ ನೋಡುವುದೇಗೆ?
ಭಾರತ ಮತ್ತು ಪಾಕಿಸ್ತಾನ ನಡುವಿನ ಮಹಿಳಾ ಏಷ್ಯಾ ಕಪ್ ಟಿ20 ಪಂದ್ಯದ ನೇರಪ್ರಸಾರವನ್ನು ಭಾರತದಲ್ಲಿ ಡಿಸ್ನಿ+ಹಾಟ್‌ಸ್ಟಾರ್ ಅಪ್ಲಿಕೇಶನ್ ಉಚಿತವಾಗಿ ವೀಕ್ಷಿಸಬಹುದು. ಜೊತೆಗೆ ನೇರ ಪ್ರಸಾರವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಸಂಜೆ 7 ಗಂಟೆಯಿಂದ ವೀಕ್ಷಿಸಬಹುದು.

ಇದನ್ನೂ ಓದಿ : ಕೊನೆಗೂ ನತಾಶಾ ಜೊತೆಗಿನ 4 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಹಾರ್ದಿಕ್ – ಫ್ಯಾನ್ಸ್​ಗೆ ವಿಶೇಷ ಮನವಿ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here