ಬೆಂಗಳೂರು : ಸ್ಯಾಂಡಲ್ವುಡ್ನಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಲೇ ಇದೆ. ಸಾಮಾನ್ಯ ಜನರಿಗೆ ಮಾದರಿಯಾಗಬೇಕಿದ್ದ ನಟರು ಹಾಗೂ ಅವರ ಆಪ್ತರು ಈಗೀಗ ತಾವೇ ನೂರಾರು ವಿವಾದದಲ್ಲಿ ಸಿಲುಕಿ ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಮೂರು ತಿಂಗಳು ಕಳೆಯುತ್ತಿದೆ. ಇದೀಗ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ನನ್ನು ಬನಶಂಕರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕಳೆದ ಮೇ 26ರ ರಾತ್ರಿ ಧ್ರುವ ಸರ್ಜಾ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಎಂಬಾತನ ಮೇಲೆ ಹಲ್ಲೆ ನಡೆದಿತ್ತು. ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎನ್ನುವವರು ಹಲ್ಲೆ ಮಾಡಿದ್ದರು. ಆದ್ರೆ ಧ್ರುವ ಸರ್ಜಾ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಹಲ್ಲೆ ಮಾಡಿಸಿದ್ದು ಮಾತ್ರ ಧ್ರುವ ಸರ್ಜಾ ಬಳಿ ಕೆಲಸ ಮಾಡುತ್ತಿದ್ದ ನಾಗೇಂದ್ರ ಎಂದು ತಿಳಿದು ಬಂದಿತ್ತು. ಇದೀಗ ಧ್ರುವ ಸರ್ಜಾಗೆ ಚಾಲಕನಾಗಿಯು ಕೆಲಸ ಮಾಡ್ತಿದ್ದ ನಾಗೇಂದ್ರಗೆ ಸಾಥ್ ಕೊಟ್ಟಿದ್ದೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಎಂದು ತಿಳಿದು ಬಂದ ಬೆನ್ನಲ್ಲೇ ಪೊಲೀಸರು ಮ್ಯಾನೇಜರ್ ಅಶ್ವಿನ್ ಬಂಧಿಸಿದ್ದಾರೆ.
ಪ್ರಶಾಂತ್ ಪೂಜಾರಿ ಅವರು ಧ್ರುವ ಸರ್ಜಾಗೆ ಆಪ್ತರಾಗಿದ್ದರು. ಧ್ರುವಗೆ ಜಿಮ್ನಲ್ಲಿ ತರಬೇತಿ ನೀಡುತ್ತಿದ್ದುದ್ದು ಇದೇ ಪ್ರಶಾಂತ್. ಇಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್ಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಹಲ್ಲೆಗೆ ಪ್ಲ್ಯಾನ್ ರೂಪಿಸಿದರು. ತಾವೇ ಹಲ್ಲೆ ಮಾಡಿದರೆ ಗೊತ್ತಾಗುತ್ತದೆ ಎಂದು ನಾಗೇಂದ್ರ ತಮ್ಮೂರಿನ ಹುಡುಗರನ್ನು ಬಿಟ್ಟು ಹಲ್ಲೆ ಮಾಡಿಸಿದ್ದನು. ಕನಕಪುರ ಮೂಲದ ಹರ್ಷ ಮತ್ತು ಸುಭಾಷ್ ಅವರನ್ನು ಮುಂದಕ್ಕೆ ಬಿಟ್ಟು ಹಲ್ಲೆ ಮಾಡಿಸಿದ್ದರು. ಪ್ರಕರಣದ ತನಿಖೆ ವೇಳೆ ಅಶ್ವಿನ್ ಪಾತ್ರ ಇರುವುದು ಬೆಳಕಿಗೆ ಬಂದಿದೆ. ಈ ಹಿನ್ನಲೆಯಲ್ಲಿ ಬನಶಂಕರಿ ಪೊಲೀಸರು ಮ್ಯಾನೇಜರ್ ಅಶ್ವಿನ್ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಇದನ್ನೂ ಓದಿ : ವಿಜಯಪುರದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಅರೆಸ್ಟ್ – 4500ಗ್ರಾಂ ಒಣ ಗಾಂಜಾ ವಶಕ್ಕೆ..!