ಕೋಲಾರ : ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮತದಾನದ ವೇಳೆ ಮಾರಾಮಾರಿ ನಡೆದಿದೆ. ಜೆಡಿಎಸ್ಗೆ ಮತ ಹಾಕಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ನಿನ್ನೆ ಸಂಜೆ ಮತದಾನದ ನಂತರ ಕೈ- ದಳ ನಡುವೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಾಂಗ್ರೆಸ್ ಕಾರ್ಯಕರ್ತರಿಂದ ಜೆಡಿಎಸ್ ಕಾರ್ಯಕರ್ತರ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಘಟನೆಯಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಗಂಭೀರ ಗಾಯಗಳಾಗಿದೆ. ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಕಣಿಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜೆಡಿಎಸ್ ಕಾರ್ಯಕರ್ತರಿಗೆ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದು, ಜೆಡಿಎಸ್ ಕಾರ್ಯಕರ್ತ ಗೋವರ್ಧನ ಬೆರಳುಗಳು ಕಟ್ ಆಗಿದ್ದು ತಲೆಗೆ ಗಂಭೀರ ಗಾಯಗಳಾಗಿದೆ.
ಜೆಡಿಎಸ್ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ಇಂದು ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಂಭೀರ ಗಾಯಗಳಾಗಿದ್ದ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ್ದಾರೆ. ಈ ಪ್ರಕರಣ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ : ಬೆಂಗಳೂರಲ್ಲಿ ಆಂಬುಲೆನ್ಸ್ ಚಾಲಕನ ಅವಾಂತರ : 2 ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ..!