ಬೆಂಗಳೂರು : ಪತ್ನಿಯ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ಟೆಕ್ಕಿ ಅತುಲ್ ಸುಭಾಷ್ ಪ್ರಕರಣ ದೇಶಾದ್ಯಂತ ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಇದೀಗ ತಲೆಮರೆಸಿಕೊಂಡಿದ್ದ ಟೆಕ್ಕಿ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾರನ್ನು ಕೊನೆಗೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಉತ್ತರ ಪ್ರದೇಶಕ್ಕೆ ತೆರಳಿದ್ದ ಮಾರತ್ತಹಳ್ಳಿ ಠಾಣೆ ಪೊಲೀಸರು ನಿಖಿತಾರನ್ನು ಬಂಧಿಸಿ ಜಡ್ಜ್ ಮುಂದೆ ಹಾಜರುಪಡಿಸಿದ್ದಾರೆ. ನಿಖಿತಾ ಸೇರಿ ಈವರೆಗೆ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ಸದ್ಯ ನಿಖಿತಾರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಅತ್ತೆ ನಿಶಾ ಸಿಂಘಾನಿಯ, ಬಾಮೈದ ಅನುರಾಗ್ ಸಿಂಘಾನಿಯ ಕೂಡ ಅರೆಸ್ಟ್ ಆಗಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಪೊಲೀಸರು ನಿಖಿತಾರನ್ನು ಬಂಧಿಸಿದ್ದಾರೆ.
ಅತ್ತೆ, ಬಾಮೈದುನ ಅಲಹಾಬಾದ್ನಲ್ಲಿ ಅರೆಸ್ಟ್ ಆಗಿದ್ದು, ಕೋರ್ಟ್ ಅನುಮತಿ ಪಡೆದು ಅವರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸೂಸೈಡ್ ಮಾಡಿಕೊಂಡಿದ್ದ ಟೆಕ್ಕಿ ಅತುಲ್ ಪತ್ನಿ, ಅತ್ತೆ ಸೇರಿ ನಾಲ್ವರ ಮೇಲೆ ಆರೋಪ ಮಾಡಿದ್ದ. ಮಾರತ್ತಹಳ್ಳಿ ಪೊಲೀಸರು ನಾಲ್ವರ ವಿರುದ್ಧವೂ FIR ದಾಖಲಿಸಿದ್ದರು. ಇದೀಗ ಪೊಲೀಸರು ನಿಖಿತಾ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ಬೈಕ್ಗೆ ಬಸ್ ಟಚ್ ಆಗಿದ್ದಕ್ಕೆ BMTC ಚಾಲಕನ ಮೇಲೆ ಹಲ್ಲೆ ಮಾಡಿದ ಮಹಿಳೆ..!