ಬೆಂಗಳೂರು : ಬೆಂಗಳೂರಿನ ನಗರ್ತಪೇಟೆಯಲ್ಲಿ ನಮಾಜ್ ವೇಳೆ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೀಗ ಈ ವಿಚಾರವಾಗಿ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ. ನಗರ್ತಪೇಟೆಯಲ್ಲಿ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು, ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ನಗರ್ತಪೇಟೆಯಲ್ಲಿ ಪೊಲೀಸರು-ಶಾಸಕ ಸುರೇಶ್ ಕುಮಾರ್ ಮಧ್ಯೆ ವಾಗ್ವಾದ ನಡೆದಿದೆ. ಪ್ರತಿಭಟನೆ ತಡೆಯಲು ಯತ್ನಿಸಿದ್ದಕ್ಕೆ ಸುರೇಶ್ ಕುಮಾರ್ ಫುಲ್ ಗರಂ ಆಗಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಶಾಸಕ ಸುರೇಶ್ ಕುಮಾರ್, ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರು-ಹಿಂದೂ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ ನಡೆದಿದೆ.
ಪ್ರತಿಭಟನಾ ಸ್ಥಳಕ್ಕೆ ಸಂಸದ ತೇಜಸ್ವಿ ಸೂರ್ಯ ಆಗಮಿಸಿ ಹಿಂದೂ ಕಾರ್ಯಕರ್ತರಿಗೆ ಸಾಥ್ ನೀಡಿದ್ದಾರೆ. ತೇಜಸ್ವಿ ಸೂರ್ಯ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಹಿಂದೂ ಕಾರ್ಯಕರ್ತರ ಜೊತೆಗೆ ವರ್ತಕರೂ ಸಿಡಿದೆದ್ದಿದ್ದಾರೆ. ರ್ಯಾಲಿ ನಡೆಸಲು ಮುಂದಾಗಿದ್ದ ಕಾರ್ಯಕರ್ತರಿಗೆ ಪೊಲೀಸರು ತಡೆ ಹೇರಿದ್ದು, ಸ್ಥಳದಲ್ಲಿ ಪ್ರತಿಭಟನಾಕಾರರು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.
ಇದನ್ನೂ ಓದಿ : ವಿಜಯಪುರದಲ್ಲಿ ಕುಡಿಯುವ ನೀರಿಗಾಗಿ ಟವರ್ ಏರಿ ಯುವಕನ ಹುಚ್ಚಾಟ..!