Download Our App

Follow us

Home » ಅಪರಾಧ » ಬೆಂಗಳೂರು ಸಿಸಿಬಿ ಪೊಲೀಸರ ಮೇಲೆ ಹ*ಲ್ಲೆ ಪ್ರಕರಣ – 8 ಮಂದಿ ನೈಜೀರಿಯಾ ಪ್ರಜೆಗಳ ಬಂಧನ..!

ಬೆಂಗಳೂರು ಸಿಸಿಬಿ ಪೊಲೀಸರ ಮೇಲೆ ಹ*ಲ್ಲೆ ಪ್ರಕರಣ – 8 ಮಂದಿ ನೈಜೀರಿಯಾ ಪ್ರಜೆಗಳ ಬಂಧನ..!

ಬೆಂಗಳೂರು : ಸಿಸಿಬಿ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ನೈಜೀರಿಯಾ ಪುಂಡರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಮಾರು 8 ಮಂದಿ ನೈಜೀರಿಯಾ ಪುಂಡರನ್ನು ರಾಜನಕುಂಟೆ ಬಳಿ ವಶಕ್ಕೆ ಪಡೆದಿದೆ.

ಸಿಸಿಬಿ ಅಧಿಕಾರಿ ಮತ್ತು ಸಿಬ್ಬಂದಿ ಮೇಲಿನ ಹಲ್ಲೆಯನ್ನು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಗಂಭೀರವಾಗಿ ಪರಿಗಣಿಸಿದ್ದರು. ಹಲ್ಲೆ ನಡೆಸಿದ್ದ ಪುಂಡರ ಹೆಡೆಮುರಿ ಕಟ್ಟಲು ಸಿಸಿಬಿ ಪೊಲೀಸರ ಜತೆಗೆ ಡಿಸ್ವಾಟ್​ ಪಡೆಯನ್ನು ನಿಯೋಜಿಸಲಾಗಿತ್ತು. ಶುಕ್ರವಾರ ಸಂಜೆ ಕಾರ್ಯಾಚರಣೆಗಿಳಿದ ಡಿಸ್ವಾಟ್​ ಮತ್ತು ಸಿಸಿಬಿ ಪೊಲೀಸರು ಇದೀಗ ನೈಜೀರಿಯಾದ ಎಂಟು ಮಂದಿಯ ಹೆಡೆಮುರಿ ಕಟ್ಟಿದ್ದಾರೆ.

ಘಟನೆಯ ಹಿನ್ನೆಲೆ : ಸಿಸಿಬಿ ಆರೋಪಿಯೊಬ್ಬನಿಂದ 4 KG MDMA ಡ್ರಗ್ಸ್ ವಶಕ್ಕೆ ಪಡೆದುಕೊಂಡಿತ್ತು. ಅದೇ ಆರೋಪಿ ರಾಜಾನುಕುಂಟೆ ವ್ಯಾಪ್ತಿಯಲ್ಲಿ ಮತ್ತಷ್ಟು ಡ್ರಗ್ಸ್ ಇರುವ ಮಾಹಿತಿ ನೀಡಿದ್ದ. ಈ ಹಿನ್ನೆಲೆ (ಏ.18) ರಾತ್ರಿ ಸಿಸಿಬಿ ಪೊಲೀಸರು ರಾಜನಕುಂಟೆ ಪೊಲೀಸ್​ ಠಾಣೆಯ ಮಾವಳ್ಳಿ ಪುರದಲ್ಲಿ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ನೈಜೀರಿಯಾ ಮೂಲದ ಡ್ರಗ್‌ ಪೆಡ್ಲರ್​ಗಳು ಸೇರಿಕೊಂಡು ಸಿಸಿಬಿ ಇನ್ಸ್ ಪೆಕ್ಟರ್ ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ಐದಕ್ಕೂ ಹೆಚ್ಚು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು. ತಕ್ಷಣ ಸಿಸಿಬಿ ಪೊಲೀಸರು 112 ಗೆ ಕರೆ ಮಾಡಿದ್ದರು. ಕೂಡಲೇ ಘಟನಾ ಸ್ಥಳಕ್ಕೆ ರಾಜಾನುಕುಂಟೆ ಹೊಯ್ಸಳ ಸಿಬ್ಬಂದಿಗಳು ಬಂದಿದ್ದರು. ಹೊಯ್ಸಳ ಸಿಬ್ಬಂದಿ ಮೇಲೂ ನೈಜೀರಿಯಾ ಪ್ರಜೆಗಳು ಹಲ್ಲೆ ನೈಜೀರಿಯಾ ಮಾಡಿ ಪರಾರಿಯಾಗಿದ್ದರು.

ಇನ್ನು ಸಿಸಿಬಿ ಒಂದು ಜೀಪ್ ಹಾಗೂ ರಾಜಾನುಕುಂಟೆ ಪೊಲೀಸ್ ಠಾಣೆಯ ಹೊಯ್ಸಳ ಜೀಪ್​ನ ಗಾಜನ್ನು ಕಬ್ಬಿಣದ ರಾಡು, ಕಲ್ಲಿನಿಂದ ಪುಡಿ ಮಾಡಿದ್ದರು. ಘಟನೆಯಲ್ಲಿ ಗಾಯಗೊಂಡ ಸಿಬ್ಬಂದಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಆಸ್ಪತ್ರೆಗೆ ಆಗಮಿಸಿ ಗಾಯಾಳು ಸಿಬ್ಬಂದಿ ಆರೋಗ್ಯ ವಿಚಾರಸಿದರು. ನಂತರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಗಳ ಪತ್ತೆಗೆ ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ್ದರು. ಇದೀಗ ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : ಪ್ರಧಾನಿ ಮೋದಿ ಬೆಂಗಳೂರು ಎಂಟ್ರಿಗೂ ಮುನ್ನ ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ನಾಯಕರ ಪ್ರೊಟೆಸ್ಟ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here