ಬೆಂಗಳೂರು : ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಷರತ್ತುಬದ್ಧ ಜಾಮೀನಿನ ಮೇಲೆ ಹೊರಗಿರುವ ಮಾಜಿ ಮಂತ್ರಿ ಮುನಿರತ್ನ ವಿರುದ್ಧ ಇದೀಗ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕೊಲೆ ಯತ್ನ, ಸುಪಾರಿ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ಮಂಜುಳಾ ಪತಿ ನಾರಾಯಣಸ್ವಾಮಿ ನೀಡಿದ ದೂರಿನ ಮೇರೆಗೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎಸ್‌ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ 590 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಇದೇ ದಿನ ಸೆಕ್ಷನ್ 354c ,109, 110, 354, 115, 116, 118 ಅಡಿಯಲ್ಲಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೀಗಾಗಿ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಮಾಜಿ ಮಂತ್ರಿ ಮತ್ತೆ ಅರೆಸ್ಟ್ ಭೀತಿಗೆ ಸಿಲುಕಿದ್ದಾರೆ. ಸದ್ಯ ನಂದಿನಿ ಲೇಔಟ್ ಪೊಲೀಸರಿಂದ ತನಿಖೆ ನಡೆಯುತ್ತಿದೆ.
ಇನ್ನು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ವರದಿ ಬಂದಿದ್ದು, ಜಾತಿ ನಿಂದನೆ ಮಾಡಿರುವ ಆಡಿಯೋ ಶಾಸಕ ಮುನಿರತ್ನ ಅವರದ್ದೇ ಎಂಬುವುದು ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟಿದೆ. ಪ್ರಕರಣದಲ್ಲಿ ಮುನಿರತ್ನರನ್ನು ಬಂಧಿಸಿದ್ದ ಪೊಲೀಸರು ಅವರ ವಾಯ್ಸ್ ಸ್ಯಾಂಪಲ್ ಸಂಗ್ರಹ ಮಾಡಿ ಎಫ್ಎಸ್ಎಲ್ಗೆ ಕಳುಹಿಸಿದ್ದರು. ಬಳಿಕ ಎಸ್ಎಲ್ ಅಧಿಕಾರಿಗಳು ಆಡಿಯೋ ಮತ್ತು ಮುನಿರತ್ನ ಧ್ವನಿ ಮ್ಯಾಚ್ ಮಾಡಿದ್ದು, ಆಡಿಯೋದಲ್ಲಿದ್ದ ಧ್ವನಿ ಮುನಿರತ್ನರದ್ದೇ ಎಂದು ರಿಪೋರ್ಟ್ ಕೊಟ್ಟಿದ್ದರು.
ಇದನ್ನೂ ಓದಿ : ಮುಡಾ ಹಗರಣವನ್ನೇ ಮೀರಿಸೋ ಬಹುದೊಡ್ಡ ಹಗರಣ – ‘ನಿರ್ಮಾಣ್ ಶೆಲ್ಟರ್ಸ್’ನಿಂದ ಸರ್ಕಾರಕ್ಕೆ 600 ಕೋಟಿ ವಂಚನೆ?