ಹಾಸನ : ಮದುವೆಗೆ ನಿರಾಕರಿಸಿದ ಪ್ರೇಯಸಿಗೆ ಯುವಕ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ ಘಟನೆ ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ನಡೆದಿದೆ.
ಕಾರಗೋಡು ಗ್ರಾಮದ ಮೋಹಿತ್ ಹಾಗೂ ಅದೇ ಗ್ರಾಮದ ಯುವತಿ ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕೆಲವು ದಿನಗಳಿಂದ ಮೋಹಿತ್‍ನಿಂದ ಯುವತಿ ದೂರವಾಗಿದ್ದಳು. ಆದರೂ ಪ್ರೇಯಸಿಯನ್ನು ಮದುವೆಯಾಗುವಂತೆ ಮೋಹಿತ್ ಕಾಡುತ್ತಿದ್ದ ಎಂದು ತಿಳಿದು ಬಂದಿದೆ.
ಮೋಹಿತ್ ಕಾಟದಿಂದ ಬೇಸತ್ತಿದ್ದ ಯುವತಿ, ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಳು. ಬಳಿಕ ಎರಡೂ ಕುಟುಂಬದಿಂದ ರಾಜಿ ಸಂಧಾನಕ್ಕೆ ಮುಂದಾಗಿದ್ದರು. ಈ ಸಂಬಂಧ ಎರಡು ಕುಟುಂಬಗಳು ಯಾರ ತಂಟೆಗೂ ಯಾರು ಬರದಂತೆ ಮಾತುಕತೆ ನಡೆಸಿದ್ದರು. ಬಳಿಕ ಗ್ರಾಮಸ್ಥರ ಜೊತೆಗೆ ಬಂದು ನೋಟರಿ (ದಸ್ತಾವೇಜು) ಮಾಡಿಸಲು ಎರಡು ಕುಟುಂಬಸ್ಥರು ಬಂದಿದ್ದರು.
ಈ ವೇಳೆ ಪಾನಮತ್ತನಾಗಿ ಬಂದಿದ್ದ ಮೋಹಿತ್ ಪಟ್ಟಣ ಪಂಚಾಯಿತಿ ಮುಂಭಾಗ ನಿಂತಿದ್ದ ಯುವತಿಯ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ. ಹಲ್ಲೆಯ ಬಳಿಕ ಆರೋಪಿ ಪರಾರಿಯಾಗಿದ್ದಾನೆ.
ಇನ್ನು ದಾಳಿಯ ಪರಿಣಾಮ ಯುವತಿಯ ತಲೆ ಹಾಗೂ ಕೈಗಳಿಗೆ ತೀವ್ರ ಗಾಯಗಳಾಗಿವೆ. ಗಾಯಳುವಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮುಡಾ ಕೇಸ್ : ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಡಿ. 10ಕ್ಕೆ ಮುಂದೂಡಿಕೆ..!