ಬಿಗ್‌ಬಾಸ್ ಸೀಸನ್ 10 ಕನ್ನಡ ಕಿರುತೆರೆಯಲ್ಲೇ ಸಖತ್ ಹವಾ ಸೃಷ್ಟಿಸಿದೆ. ಈ ರಿಯಾಲಿಟಿ ಶೋನ ಪ್ರತಿಯೊಬ್ಬ ಕಂಟೆಸ್ಟೆಂಟ್‌ಗಳ ಮೇಲೆ ವೀಕ್ಷಕರು ಕಣ್ಣಿಟ್ಟಿದ್ದಾರೆ. ಸದ್ಯ ಬಿಗ್‌ಬಾಸ್ ಮನೆಯಲ್ಲಿ ಉಳಿದಿರೋ 9 ಸ್ಪರ್ಧಿಗಳಲ್ಲಿ ಡ್ರೋನ್ ಪ್ರತಾಪ್ ಕೂಡ ಒಬ್ಬರು. ಡ್ರೋನ್ ಪ್ರತಾಪ್ ಆಟದ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದ ಅಭಿಮಾನಿಗಳಿಗೆ ಸದ್ಯ ಶಾಕಿಂಗ್ ಸುದ್ದಿಯೊಂದು ಬಂದಿದೆ.
ಬಿಗ್‌ಬಾಸ್ ಸೀಸನ್ 10ರ ಸ್ಪರ್ಧಿ ಡ್ರೋನ್ ಪ್ರತಾಪ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಶಾಕಿಂಗ್ ನ್ಯೂಸ್ ಜೊತೆಗೆ ಮತ್ತೊಂದು ಸುದ್ದಿ ಎಲ್ಲೆಡೆ ಸದ್ದು ಮಾಡುತ್ತಿದೆ.
ಡ್ರೋನ್ ಪ್ರತಾಪ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಅನ್ನೋ ವದಂತಿ ಹಬ್ಬಿದೆ. ನಿನ್ನೆ ರಾತ್ರಿಯಿಂದಲೇ ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಕಾಣಿಸಿಕೊಂಡಿಲ್ಲ.
ಹಾಗಾಗಿ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ಬಾರಿ ಕಣ್ಣಿಗೆ ಸೋಪಿನ ನೀರು ಹಾಕಿಸಿಕೊಂಡು ಆಸ್ಪತ್ರೆ ಸೇರಿದ್ದರು.
ಆದರೆ, ಈ ಬಾರಿ ಅವರಿಗೆ ಆಹಾರದಲ್ಲಿ ವ್ಯತ್ಯಾಸವಾಗಿ ಆಸ್ಪತ್ರೆ ಸೇರಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಇನ್ನೂ ಕೆಲವರು ಬಿಗ್ ಬಾಸ್ ಮನೆಗೆ ವಾಪಸ್ಸು ಆಗದೇ ಇರುವಂತಹ ಘಟನೆ ನಡೆದಿದೆ ಎಂದೂ ಬರೆದುಕೊಂಡಿದ್ದಾರೆ.
ಫುಡ್ ಪಾಯಿಸನ್ ಆಗಿದೆ ಎಂದು ಕೆಲವು ಮೂಲಗಳು ಮಾಹಿತಿ ನೀಡಿದರೆ, ಇನ್ನೂ ಕೆಲವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಹೇಳುತ್ತಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಕೋವಿಡ್ ಸೋಂಕು ಏನಾದರೂ ತಗಲಿರಬಹುದಾ ಎನ್ನುವ ಪ್ರಶ್ನೆಯನ್ನೂ ಮಾಡಿದ್ದಾರೆ. ಹಾಗಾಗಿ ಸಹಜವಾಗಿಯೇ ಡ್ರೋನ್ ಪ್ರತಾಪ್ ಅವರ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ.
ಪ್ರತಾಪ್ ಅವರಿಗೆ ಏನಾಗಿದೆ ಎಂದು ತಿಳಿಸಿ ಎಂದು ವಾಹಿನಿಗೆ ಸೋಷಿಯಲ್ ಮೀಡಿಯಾ ಮೂಲಕ ಕೇಳುತ್ತಿದ್ದಾರೆ.
ಡ್ರೋನ್ ಪ್ರತಾಪ್ ಅವರ ಟೀಮ್ ಹ್ಯಾಂಡಲ್ ಮಾಡುವಂತಹ ಸೋಷಿಯಲ್ ಮೀಡಿಯಾದಲ್ಲಿ ಊಟದಲ್ಲಿ ಸ್ವಲ್ಪ ವ್ಯತ್ಯಾಸ ಉಂಟಾಗಿ ಹುಷಾರು ತಪ್ಪಿದ್ದಾರೆ.
ಇನ್ನ ಸ್ವಲ್ಪ ಸಮಯದ ಒಳಗೆ ಬಿಗ್ ಬಾಸ್ ಮನೆಗೆ ನಿಮ್ಮ ಡ್ರೋನ್ ಪ್ರತಾಪ್ ಅವರು ತೆರಳಿದ್ದಾರೆ. ಅವರಿಗೆ ವೋಟ್ ಮಾಡಿ’ ಎಂದು ಪೋಸ್ಟ್ ಮಾಡಿದ್ದಾರೆ.
ಬಿಗ್ ಬಾಸ್ ಮನೆಯ ಅಪ್ ಡೇಟ್ ನೀಡುವಂತಹ ಮತ್ತು ಅದರಲ್ಲಿ ಬಹುತೇಕ ವಿಷಯಗಳು ನಿಜವೂ ಆಗಿರುವಂತಹ ಬಿಬಿಕೆ ಅಪ್ ಡೇಟ್ ಸೋಷಿಯಲ್ ಮೀಡಿಯಾ ಬರೆದುಕೊಂಡಂತೆ ಮತ್ತೆ ಬಿಗ್ ಬಾಸ್ ಮನೆಗೆ ಪ್ರತಾಪ್ ಬರೋದು ಅನುಮಾನ ಎಂದು ಪೋಸ್ಟ್ ಮಾಡಲಾಗಿದೆ.
ಇದನ್ನೂ ಓದಿ : ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ..!