ಬೆಂಗಳೂರು : ಪತ್ನಿ ಹಾಗೂ ಆಕೆಯ ಕುಟುಂಬದವರ ಕಿರುಕುಳಕ್ಕೆ ನೊಂದು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಅತುಲ್ ಆತ್ಮಹತ್ಯೆಗೆ ಮುನ್ನ ಮಾಡಿರುವ ವಿಡಿಯೋ, ಅದ್ರಲ್ಲಿ ಉಲ್ಲೇಖಸಿರುವ ಅಂಶಗಳು ದೇಶಾದ್ಯಂತ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ.
ಅತುಲ್ ಸಾವಿನ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಬೆಂಗಳೂರು ಪೊಲೀಸರು, ಸದ್ಯ ಪರಾರಿಯಾಗಿದ್ದ ಅತುಲ್ ಅತ್ತೆ ನಿಶಾ ಮತ್ತು ಬಾಮೈದ ಅನುರಾಗ್ರನ್ನು ಉತ್ತರಪ್ರದೇಶದ ಕಾತ್ವಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಪ್ರಕರಣ ದಾಖಲಾಗುತ್ತಿದ್ದಂತೆ ನಿಶಾ, ಅನುರಾಗ್, ತಪ್ಪಿಸಿಕೊಳ್ಳಲು ಮುಂದಾಗಿದ್ದು, ಮನೆಗೆ ಬೀಗ ಹಾಕಿ ಪರಾರಿಯಾಗಿದ್ದರು. ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆರೋಪಿಗಳಿಗಾಗಿ ಬೆಂಗಳೂರು ಪೊಲೀಸರು ಹುಡುಕಾಟ ನಡೆಸಿ ಇದೀಗ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಆದರೆ ಅತುಲ್ ಪತ್ನಿ ನಿಖಿತಾ ಬಂಧನ ಭೀತಿಯಿಂದ ಪರಾರಿಯಾಗಿದ್ದು, ಆಕೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಅತುಲ್ ಅತ್ತೆ ನಿಶಾ ಮತ್ತು ಬಾಮೈದ ಅನುರಾಗ್ರನ್ನು ಕಾತ್ವಲ್ಲಿ ಠಾಣೆಗೆ ಪೊಲೀಸರು ಕರೆದೊಯ್ದಿದ್ದು, ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ. ಇಂದು ಕೋರ್ಟ್ ಅನುಮತಿ ಪಡೆದು ಆರೋಪಿಗಳನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆಯಿದೆ.
ಇದನ್ನೂ ಓದಿ : ಇಂದು ನಟ ದರ್ಶನ್ ಪಾಲಿಗೆ ಬಿಗ್ ಡೇ.. ಬೇಲ್ ಸಿಗುತ್ತಾ? ಜೈಲೇ ಗತಿಯಾಗುತ್ತಾ?