ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಸಿನಿಮಾ ಫೈರ್ ಫ್ಲೈ ಬಹಳಷ್ಟು ವಿಶೇಷತೆಯನ್ನು ಹೊಂದಿದೆ. ನಿವೇದಿತಾ ಶಿವರಾಜ್ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಎಂಬುದರ ಜೊತೆಗೆ, ಹೆಸರಾಂತ ತಾರೆಯರು ಈ ಚಿತ್ರದಲ್ಲಿ ನಟಿಸುತ್ತಿರುವುದು ವಿಶೇಷತೆಗೆ ಕಾರಣವಾಗಿದೆ. ಈ ಸಿನಿಮಾದಲ್ಲಿ ಹಿರಿಯ ನಟ ಅಚ್ಯುತ್ ಕುಮಾರ್ ಹಾಗೂ ಸುಧಾರಾಣಿ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಹೊಸ ನಾಯಕ ಮತ್ತು ನಿರ್ದೇಶಕ ವಂಶಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ‘ಫೈರ್ ಫ್ಲೈ’ ಸಿನಿಮಾದ ಆಡಿಯೋ ಹಕ್ಕು ಈಗ ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ.
ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ, ನಟಿಸುತ್ತಿರುವ ಫೈರ್ ಫ್ಲೈ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ಫೈರ್ ಫ್ಲೈ ಆಡಿಯೋ ಹಕ್ಕನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.
‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರಲಿದ್ದಾರೆ.
ಈ ಚಿತ್ರಕ್ಕೆ ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ. ಬೆಳಕಿನ ಹಬ್ಬ ದೀಪಾವಳಿಗೆ ಫೈರ್ ಫ್ಲೈ ಸಿನಿಮಾ ಥಿಯೇಟರ್ ಬೆಳಗಲಿದೆ.
ಇದನ್ನೂ ಓದಿ : ಗೊಂದಲದ ಗೂಡಾದ ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ – KAT ಕೋರ್ಟ್ ಮೊರೆ ಹೋದ ಅಧಿಕಾರಿಗಳು..!