Download Our App

Follow us

Home » ಅಪರಾಧ » ಮಾಜಿ ಸಚಿವ ಬಿ.ನಾಗೇಂದ್ರ ಮೊಬೈಲ್ ED​​ ವಶಕ್ಕೆ..!

ಮಾಜಿ ಸಚಿವ ಬಿ.ನಾಗೇಂದ್ರ ಮೊಬೈಲ್ ED​​ ವಶಕ್ಕೆ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಜಿ ಸಚಿವ ಬಿ.ಎನ್‌ ನಾಗೇಂದ್ರ ಅವರ ಮೊಬೈಲ್​​ನ್ನು ED ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ್ದಾರೆ. ನಾಗೇಂದ್ರ ಅವರ ಮೊಬೈಲ್‌ ಫೋನ್‌ ವಶಕ್ಕೆ ಪಡೆದು ಸುಮಾರು 2 ಗಂಟೆಯಿಂದ ವಿಚಾರಣೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಕಲೆಹಾಕುತ್ತಿದ್ದು, ಫ್ಲಾಟ್​, ಮನೆಯ ಇಂಚಿಂಚೂ ಬಿಡದೇ ಪರಿಶೀಲನೆ ನಡೆಸ್ತಿದ್ದಾರೆ.

ಬಹುಕೋಟಿ ಹಗರಣ ಕೇಸ್‌ಗೆ ಸಂಬಂಧಿಸಿದಂತೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದ ಮರುದಿನವೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಈಗಾಗಲೇ ಶಾಸಕ ಬಸನಗೌಡ ದದ್ದಲ್‌, ಯ್ಯೂನಿಯನ್ ಬ್ಯಾಂಕ್ ಬ್ರಾಂಚ್ ಹೆಡ್ ದೀಪಾ ಮುಂತಾದವರ ಮನೆಗಳ ಮೇಲೂ ದಾಳಿ ನಡೆಸಿ, ವಿಚಾರಣೆ ನಡೆಸಲಾಗುತ್ತಿದೆ. ಈ ಮಧ್ಯ ಮಾಜಿ ಸಚಿವ ನಾಗೇಂದ್ರ ಅವರ ಮೊಬೈಲ್​​ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ವಾಲ್ಮೀಕಿ ನಿಗಮ ಹಗರಣ ಕೇಸ್ – ಯೂನಿಯನ್​ ಬ್ಯಾಂಕ್​ ಅಧಿಕಾರಿಗಳಿಗೂ ED ಶಾಕ್..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here