Download Our App

Follow us

Home » ಸಿನಿಮಾ » ಬಡೇ ಮಿಯಾನ್ ಚೋಟೆ ಮಿಯಾನ್ ಟೈಟಲ್ ಟ್ರ್ಯಾಕ್ ರಿಲೀಸ್..!

ಬಡೇ ಮಿಯಾನ್ ಚೋಟೆ ಮಿಯಾನ್ ಟೈಟಲ್ ಟ್ರ್ಯಾಕ್ ರಿಲೀಸ್..!

ಬಾಲಿವುಡ್‌ನ ಪವರ್-ಪ್ಯಾಕ್ಡ್ ಜೋಡಿಗಳಾದ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ನಟನೆಯ ‘ಬಡೇ ಮಿಯಾನ್ ಚೋಟೆ ಮಿಯಾನ್’ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಬಾಸ್ಕೊ-ಸೀಸರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡಿಗೆ ಅಕ್ಕಿ-ಟೈಗರ್ ಭರ್ಜರಿ ಹೆಜ್ಜೆ ಹಾಕಿದ್ದಾರೆ. ಅನಿರುದ್ಧ್ ರವಿಚಂದರ್ ಮತ್ತು ವಿಶಾಲ್ ಮಿಶ್ರಾ ಧ್ವನಿಯಾಗಿರುವ ಟೈಟಲ್ ಟ್ರ್ಯಾಕ್ ಗೆ ವಿಶಾಲ್ ಮಿಶ್ರಾ ಟ್ಯೂನ್ ಹಾಕಿದ್ದಾರೆ.

ಡೆಹರೂಡನ್ ನಲ್ಲಿ ಚಿತ್ರೀಕರಿಸಲಾಗಿರುವ ಹಾಡಿಗೆ 100ಕ್ಕೂ ಹೆಚ್ಚು ಡ್ಯಾನ್ಸರ್ಸ್ ಕುಣಿದು ಕುಪ್ಪಳಿಸಿದ್ದಾರೆ. ಕನ್ನಡದಲ್ಲಿಯೂ ಹಾಡು ಮೂಡಿಬಂದಿದ್ದು, ಸಂತೋಷ್ ವಿಶ್ವರತ್ನ ಸಾಹಿತ್ಯ ಬರೆದಿದ್ದು, ಅನಿರುದ್ಧ ಶಾಸ್ತ್ರಿ, ಅಭಿಷೇಕ್ ಎಂ ಆರ್ ಹಾಗೂ ಋಷಿಕೇಶ ಬಿ ಆರ್ ಕಂಠ ಕುಣಿಸಿದ್ದಾರೆ.

ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ನಾಯಕರಾಗಿ ನಟಿಸಿದ್ದು, ಖಳನಾಯಕನಾಗಿ ಪೃಥ್ವಿರಾಜ್ ಸುಕುಮಾರನ್ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟಿಮಣಿಯರಾದ ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್, ಅಲಯಾ ಎಫ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಮುಂಬೈ, ಲಂಡನ್, ಅಬುಧಾಬಿ, ಸ್ಕಾಟ್ಲೆಂಡ್ ಮತ್ತು ಜೋರ್ಡಾನ್ ಸ್ಥಳಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಹಾಲಿವುಡ್ ರೇಂಜ್ ಗೆ ದೊಡ್ಡ ಬಜೆಟ್ ನಲ್ಲಿ ಬಡೇ ಮೀಯಾ ಚೋಟೆ ಮೀಯಾ ಚಿತ್ರ ನಿರ್ಮಿಸಲಾಗಿದೆ. ಅಲಿ ಅಬ್ಬಾಸ್ ಝಫರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ವಶು ಭಗ್ನಾನಿ, ದೀಪಿಕ್ಷಾ ದೇಶಮುಖ್, ಜಾಕಿ ಭಗ್ನಾನಿ,ಹಿಮಾಂಶು ಕಿಶನ್ ಮೆಹ್ರಾ, ಅಲಿ ಅಬ್ಬಾಸ್ ಜಾಫರ್ ಚಿತ್ರ ನಿರ್ಮಾಣ ಮಾಡಿದ್ದಾರೆ.

ವಶು ಭಗ್ನಾನಿ ಮತ್ತು ಪೂಜಾ ಎಂಟರ್ ಟೈನ್ಮೆಂಟ್ AAZ ಫಿಲ್ಮಂಸ್ ಸಹಯೋಗದಡಿ ಬಡೇ ಮಿಯಾ ಚೋಟೆ ಮೀಯಾ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಏಪ್ರಿಲ್ 2024 ಈದ್ ಈದ್ ಸಂದರ್ಭದಲ್ಲಿ ಹಿಂದಿ, ಕನ್ನಡ, ತೆಲುಗು, ತಮಿಳು, ಮಲೆಯಾಳಂ ಭಾಷೆಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

ಇದನ್ನೂ ಓದಿ : ಫೆ.23 ರಂದು ತನುಷ್ ಶಿವಣ್ಣ – ಸೋನಾಲ್ ಮೊಂತೆರೊ ಜೋಡಿಯ ‘Mr ನಟ್ವರ್ ಲಾಲ್’ ಚಿತ್ರ ತೆರೆಗೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here