ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ದರ್ಶನ್ ಸದ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದು, ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಅವರಿಗೆ ವಿವಿಧ ಪರೀಕ್ಷೆಗಳನ್ನು ಮಾಡಲಾಗಿದೆ. ಸೂಚನೆಯಂತೆ ದರ್ಶನ್ ಚಿಕಿತ್ಸಾ ವರದಿಯನ್ನು ನಿನ್ನೆ ಹೈಕೋರ್ಟ್ಗೆ ಸಲ್ಲಿಸಲಾಗಿದೆ.
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರು ಜಾಮೀನಿಗಾಗಿ ಆರಂಭದಿಂದಲೇ ಪ್ರಯತ್ನಿಸುತ್ತಿದ್ದಾರೆ. ಆದರೆ ಪವಿತ್ರಾ ಗೌಡಗೆ ಇದುವರೆಗೂ ಜಾಮೀನು ಸಿಕ್ಕಿಲ್ಲ.
ಇಂದು ಪವಿತ್ರಾಗೌಡ ಸೇರಿ ನಾಲ್ವರ ಬೇಲ್ ಅರ್ಜಿ ವಿಚಾರಣೆಗೆ ಬರಲಿದ್ದು, ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರ ಪೀಠದಲ್ಲಿಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಸೇಷನ್ಸ್ ಕೋರ್ಟ್ನಲ್ಲಿ ಪವಿತ್ರಾಗೌಡ, ಅನುಕುಮಾರ್, ಲಕ್ಷ್ಮಣ್, ನಾಗರಾಜ್ ಜಾಮೀನು ಅರ್ಜಿ ವಜಾ ಆಗಿತ್ತು. ನಂತರ ಹೈಕೋರ್ಟ್ಗೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಲಾಗಿತ್ತು.
ಪವಿತ್ರಾ ಗೌಡ ಅವರು ಜೈಲು ಸೇರಿದಾಗಿನಿಂದ ಅವರ ಫ್ಯಾಮಿಲಿ ಜಾಮೀನಿಗಾಗಿ ಪ್ರಯತ್ನಿಸುತ್ತಿದ್ದು, ಪವಿತ್ರಾ ಗೌಡ ಅವರ ತಾಯಿ, ಸಹೋದರ, ಮಗಳು ಅವರ ಜಾಮೀನಿಗಾಗಿ ಪ್ರಯತ್ನಿಸುತ್ತಲೇ ಇದ್ದಾರೆ. ಆದರೆ ಅವರಿಗೆ ಈವರೆಗೆ ಜಾಮೀನು ಮಂಜೂರಾಗಿಲ್ಲ.
ಇದನ್ನೂ ಓದಿ : ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅರೆಸ್ಟ್..!