Download Our App

Follow us

Home » ಸಿನಿಮಾ » ರೇಣುಕಾಸ್ವಾಮಿ ಕೊಲೆ ಕೇಸ್​ : ಇಂದು ಪವಿತ್ರಾ ಗೌಡ ಸೇರಿ ನಾಲ್ವರ ಬೇಲ್​ ಅರ್ಜಿ ವಿಚಾರಣೆ..!

ರೇಣುಕಾಸ್ವಾಮಿ ಕೊಲೆ ಕೇಸ್​ : ಇಂದು ಪವಿತ್ರಾ ಗೌಡ ಸೇರಿ ನಾಲ್ವರ ಬೇಲ್​ ಅರ್ಜಿ ವಿಚಾರಣೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ದರ್ಶನ್​ ಸದ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದು, ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಅವರಿಗೆ ವಿವಿಧ ಪರೀಕ್ಷೆಗಳನ್ನು ಮಾಡಲಾಗಿದೆ. ಸೂಚನೆಯಂತೆ ದರ್ಶನ್​ ಚಿಕಿತ್ಸಾ ವರದಿಯನ್ನು ನಿನ್ನೆ ಹೈಕೋರ್ಟ್​ಗೆ ಸಲ್ಲಿಸಲಾಗಿದೆ.

ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರು ಜಾಮೀನಿಗಾಗಿ ಆರಂಭದಿಂದಲೇ ಪ್ರಯತ್ನಿಸುತ್ತಿದ್ದಾರೆ. ಆದರೆ ಪವಿತ್ರಾ ಗೌಡಗೆ ಇದುವರೆಗೂ ಜಾಮೀನು ಸಿಕ್ಕಿಲ್ಲ.

ಇಂದು ಪವಿತ್ರಾಗೌಡ ಸೇರಿ ನಾಲ್ವರ ಬೇಲ್​ ಅರ್ಜಿ ವಿಚಾರಣೆಗೆ ಬರಲಿದ್ದು, ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರ ಪೀಠದಲ್ಲಿಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಸೇಷನ್ಸ್ ಕೋರ್ಟ್​ನಲ್ಲಿ ಪವಿತ್ರಾಗೌಡ, ಅನುಕುಮಾರ್, ಲಕ್ಷ್ಮಣ್, ನಾಗರಾಜ್ ಜಾಮೀನು ಅರ್ಜಿ ವಜಾ ಆಗಿತ್ತು. ನಂತರ ಹೈಕೋರ್ಟ್​ಗೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಲಾಗಿತ್ತು.

ಪವಿತ್ರಾ ಗೌಡ ಅವರು ಜೈಲು ಸೇರಿದಾಗಿನಿಂದ ಅವರ ಫ್ಯಾಮಿಲಿ ಜಾಮೀನಿಗಾಗಿ ಪ್ರಯತ್ನಿಸುತ್ತಿದ್ದು, ಪವಿತ್ರಾ ಗೌಡ ಅವರ ತಾಯಿ, ಸಹೋದರ, ಮಗಳು ಅವರ ಜಾಮೀನಿಗಾಗಿ ಪ್ರಯತ್ನಿಸುತ್ತಲೇ ಇದ್ದಾರೆ. ಆದರೆ ಅವರಿಗೆ ಈವರೆಗೆ ಜಾಮೀನು ಮಂಜೂರಾಗಿಲ್ಲ.

ಇದನ್ನೂ ಓದಿ : ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅರೆಸ್ಟ್​​..!

Leave a Comment

DG Ad

RELATED LATEST NEWS

Top Headlines

ಸೈಕ್ಲೋನ್​ ಎಫೆಕ್ಟ್ – ಚಾಮುಂಡಿ ಬೆಟ್ಟದಲ್ಲಿ ಉರುಳಿದ ಬೃಹತ್ ಬಂಡೆ.. ಬಸ್​ ಜಸ್ಟ್​ ಮಿಸ್​..!

ಮೈಸೂರು : ನೈಋುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ತಲ್ಲಣ ಸೃಷ್ಟಿಸಿದ್ದ ‘ಫೆಂಗಲ್’ ಚಂಡಮಾರುತ ಇದೀಗ ಕರ್ನಾಟಕದ ಬಾಗಿಲಿಗೂ ಬಂದಿದೆ. ಸೈಕ್ಲೋನ್

Live Cricket

Add Your Heading Text Here