Download Our App

Follow us

Home » ರಾಜಕೀಯ » ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೇಸ್ – ಮೂವರು ಆರೋಪಿಗಳಿಗೆ ಜಾಮೀನು ಮಂಜೂರು..!

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೇಸ್ – ಮೂವರು ಆರೋಪಿಗಳಿಗೆ ಜಾಮೀನು ಮಂಜೂರು..!

ಬೆಂಗಳೂರು : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಯ್ಯದ್‌ ನಾಸೀರ್‌ ಹುಸೇನ್‌ ಅವರು ಜಯಗಳಿಸಿದ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು (ಎಸಿಎಂಎಂ) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬಂಧಿತರಾದ ದೆಹಲಿಯ ಕಿಶನ್‌ ಗಂಜ್‌ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ, ಬೆಂಗಳೂರಿನ ಜಯಮಹಲ್‌ ನಿವಾಸಿ ಡಿ.ಎಸ್‌ ಮುನಾವರ್ ಅಹ್ಮದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 39ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವಿ ವಿಜೇತ್‌ ಪುರಸ್ಕರಿಸಿದ್ದಾರೆ.

ಆರೋಪಿಗಳು ರೂ.1 ಲಕ್ಷ ಮೊತ್ತದ ಮುಚ್ಚಳಿಕೆ ನೀಡಬೇಕು, ಇಬ್ಬರು ವ್ಯಕ್ತಿಗಳು ಜಾಮೀನು ಒದಗಿಸಬೇಕು, ಆರೋಪಿಗಳು ದೇಶ ಬಿಟ್ಟು ಹೋಗಬಾರದು, ವಿಚಾರಣಾಧೀನ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಮತ್ತು ಇಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

ಏನಿದು ಪ್ರಕರಣ? ಕಳೆದ ತಿಂಗಳ 27ರಂದು ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಗೆ ಮತದಾನ ನಡೆದಿತ್ತು. ಫಲಿತಾಂಶ ಪ್ರಕಟವಾದ ಬಳಿಕ, ವಿಜೇತ ಅಭ್ಯರ್ಥಿ ನಾಸೀರ್‌ ಹುಸೇನ್‌ ಪರ ಸಂಭ್ರಮಾಚರಿಸುವ ವೇಳೆ ಆರೋಪಿಗಳು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ ಎಂದು ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ : ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ – ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲು..!

Leave a Comment

DG Ad

RELATED LATEST NEWS

Top Headlines

ಅಭ್ಯರ್ಥಿ ಡಿಸೈಡ್ ಮಾಡೋದು ಬಿಜೆಪಿ ವರಿಷ್ಠರು ಮತ್ತು ನಾನು – ಯೋಗೇಶ್ವರ್​ಗೆ HDK ಟಾಂಗ್​​​..!

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ತೆರವಾಗಿರುವ ಮೂರು ವಿಧಾನ ಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ನಡುವೆ ಚನ್ನಪಟ್ಟಣ

Live Cricket

Add Your Heading Text Here