ಮಂಗಳೂರು : ಸಿನಿಮಾ, ನಾಟಕ, ಸೀರಿಯಲ್ನಲ್ಲಿ ದೈವಾರಾಧನೆಗೆ ಅಪಮಾನ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ದೈವಾರಾಧಕರು ಹಾಗೂ ಭಜರಂಗದಳದ ಮುಖಂಡರು ಮನವಿ ಸಲ್ಲಿಸಿದ್ದಾರೆ.
ಕಾಂತಾರ ಸಿನಿಮಾದಲ್ಲಿ ದೈವದ ಅಣುಕು ವೇಷ ಹಾಕಿರುವ ರಿಷಬ್ ಶೆಟ್ಟಿ, ಶಿವದೂತೆ ಗುಳಿಗೆ ನಾಟಕದಲ್ಲಿ ದೈವದ ಅಣುಕು ವೇಷ ಧರಿಸಿದ ಸ್ವರಾಜ್ ಹಾಗೂ ಕಾವೇರಿ ಧಾರಾವಾಹಿಯ ಸಿ.ಕೆ ಪ್ರಶಾಂತ್ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ತುಳುನಾಡ ದೈವಾರಾಧನಾ ಸಂರಕ್ಷಣಾ ವೇದಿಕೆ ಮನವಿ ಮಾಡಿದೆ.
ದೈವಾರಾಧಕರ ಹೋರಾಟಕ್ಕೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಸಂಘಟನೆ ಸಾಥ್ ನೀಡಿದೆ. ಟಿವಿ, ಸಿನೆಮಾ, ನಾಟಕಗಳಲ್ಲಿ ದೈವಾರಾಧನೆಯ ಪ್ರದರ್ಶನ ಆಗಬಾರದು, ಕಂಡ ಕಂಡಲ್ಲಿ ದೈವಾರಾಧನೆ ಪ್ರದರ್ಶನವಾದ್ರೆ ಬೆಂಗಳೂರಿನಲ್ಲೇ ಮುತ್ತಿಗೆ ಹಾಕುತ್ತೇವೆ ಎಂದು ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ರಿಷಬ್ ಶೆಟ್ಟಿಗೂ ಶ್ರೀಧರ್ ಮುಲ್ಕಿ, ಶರಣು ಪಂಪ್ವೆಲ್, ಪ್ರಭಾಕರ್ ಸೇರಿ ಹಲವರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಹಾವೇರಿ : ಹೆಂಡತಿ ಜೊತೆ ಅಕ್ರಮ ಸಂಬಂಧ ಶಂಕೆ – ತಮ್ಮನ ಎದೆಗೆ ಚೂರಿ ಇರಿದು ಕೊಂ*ದ ಅಣ್ಣ..!