Download Our App

Follow us

Home » ಜಿಲ್ಲೆ » ಭಜರಂಗದಳದ ಪ್ರತಿರೋಧ ಎದುರಿಸಲು ಸಿದ್ಧರಾಗಿ – ಆರ್.ಅಶೋಕ್​​ಗೆ ಪುನೀತ್ ಅತ್ತಾವರ ಎಚ್ಚರಿಕೆ..!

ಭಜರಂಗದಳದ ಪ್ರತಿರೋಧ ಎದುರಿಸಲು ಸಿದ್ಧರಾಗಿ – ಆರ್.ಅಶೋಕ್​​ಗೆ ಪುನೀತ್ ಅತ್ತಾವರ ಎಚ್ಚರಿಕೆ..!

ಮಂಗಳೂರು : ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ನಿನ್ನೆ ನಡೆದ ಅಧಿವೇಶನದಲ್ಲಿ ಮಂಗಳೂರು ಪಬ್ ದಾಳಿ ನಡೆದಾಗ ನಾನು ಗೃಹ ಸಚಿವನಾಗಿದ್ದೆ. ಆ ಸಮಯದಲ್ಲಿ ನಾನು ಭಜರಂಗದಳದವರ ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ದ ಭಜರಂಗದಳ ಕಿಡಿಕಾರಿದೆ.

 

ಅಶೋಕ್ ಹೇಳಿಕೆ ವಿರುದ್ದ ಮಂಗಳೂರು ಭಜರಂಗದಳ ಕಾರ್ಯಕರ್ತರು ತೀವ್ರ ಆಕ್ರೋಶ ಹೊರ ಹಾಕಿದ್ದು, ಮಂಗಳೂರಿನ ಬಜರಂಗದಳದ ಕಾರ್ಯಕರ್ತರ ಪ್ರತಿರೋಧ ಎದುರಿಸಲು ಸಿದ್ಧರಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಆರ್‌‌.ಅಶೋಕ್​ಗೆ ಭಜರಂಗದಳ ಮಂಗಳೂರು ವಿಭಾಗ ಸಹಸಂಯೋಜಕ ಪುನೀತ್ ಅತ್ತಾವರ ಅವರು ತನ್ನ ಫೇಸ್ ಬುಕ್ ಖಾತೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಪುನೀತ್ ಅತ್ತಾವರ ಅವರು ತಮ್ಮ  ಫೇಸ್ ಬುಕ್ ಖಾತೆಯಲ್ಲಿ ‘ನೀವು ಆರ್ ಅಶೋಕ್ ಅಲ್ಲ.. ನಿಮ್ಮ ಹೆಸರನ್ನು ಎ ಅಶೋಕ್ ಅಂತ ಬದಲಾಯಿಸಿ ಬಿಡಿ ಅಡ್ಜಸ್ಟ್ ಮೆಂಟ್ ಅಶೋಕ್ ಅವರೇ.. ನಿಮ್ಮ ನಾಲಗೆಯನ್ನು ನಾಲಗೆ ರೀತಿಯಲ್ಲಿ ಬಳಸಿ, ಎಕ್ಕಡದ ರೀತಿ ಬಳಸಿಕೊಳ್ಳಬೇಡಿ. ಅಡ್ಜಸ್ಟ್ ಮೆಂಟ್ ರಾಜಕಾರಣ ಎಂಬ ಕೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ. ಪ್ರತಿಪಕ್ಷನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ.

ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ. ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಬರೆದು ಭಜರಂಗದಳ ಮುಖಂಡ ಪುನೀತ್ ಅತ್ತಾವರ ಆರ್.ಅಶೋಕ್​ಗೆ ಎಚ್ಚರಿಕೆ ನೀಡಿದ್ದಾರೆ.

ಆರ್.ಅಶೋಕ್ ಅಧಿವೇಶನದಲ್ಲಿ ಹೇಳಿದ್ದೇನು? ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ನಿನ್ನೆ ನಡೆದ ಅಧಿವೇಶನದಲ್ಲಿ      ಮಂಗಳೂರು ಪಬ್ ದಾಳಿ ವೇಳೆ ನಾನು ರಾಜ್ಯದ ಗೃಹ ಸಚಿವನಾಗಿದ್ದೆ. ಅವತ್ತು ಭಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ನಾನು ಯಾವುದೇ ಒತ್ತಡಕ್ಕೆ ಮಣಿಯದೇ ಪಬ್ ದಾಳಿ ಮಾಡಿದ್ದ ಭಜರಂಗದಳದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಧಿವೇಶನದಲ್ಲಿ ಹೇಳಿಕೆ ನೀಡಿದ್ದರು. ಸದ್ಯ ಅಶೋಕ್​ ಅವರ ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ : ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ – 263 ರಸ್ತೆಗಳು, 4 ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್..!

Leave a Comment

DG Ad

RELATED LATEST NEWS

Top Headlines

ಹಾಸನಾಂಬೆ ಸನ್ನಿಧಿಯಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಮಧ್ಯೆ ಮಾರಾಮಾರಿ..!

ಹಾಸನ : ಹಾಸನದ ಹಾಸನಾಂಬೆ ದೇವಿಯ ಉತ್ಸವ ಆರಂಭವಾಗಿದೆ. ಅಕ್ಟೋಬರ್ 24ರಂದು ದೇಗುಲದ ಬಾಗಿಲು ತೆರೆಯಲಾಗಿದೆ. ನವೆಂಬರ್ 3ರವರೆಗೆ ಉತ್ಸವ ನಡೆಯುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ

Live Cricket

Add Your Heading Text Here