Download Our App

Follow us

Home » ಅಪರಾಧ » ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ – ಮಹಿಳೆಯನ್ನು ಬಲವಂತವಾಗಿ ಹಗ್ ಮಾಡಿ ಕಿಸ್ ಕೊಟ್ಟು ಕಾಮುಕ ಎಸ್ಕೇಪ್​..!

ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ – ಮಹಿಳೆಯನ್ನು ಬಲವಂತವಾಗಿ ಹಗ್ ಮಾಡಿ ಕಿಸ್ ಕೊಟ್ಟು ಕಾಮುಕ ಎಸ್ಕೇಪ್​..!

ಬೆಂಗಳೂರು : ಸಿಲಿಕಾನ್​ ಸಿಟಿ ಬೆಂಗಳೂರಿನ ಮಹಿಳೆಯರು ಒಂಟಿಯಾಗಿ ಮನೆಯಿಂದ ಹೊರ ಬರುವಂತೆ ಇಲ್ವಾ? ಎಂಬ ಪ್ರಶ್ನೆ ಮೂಡಿದೆ. ಹೌದು, ಬೆಳಂಬೆಳಗ್ಗೆ 5 ಘಂಟೆ ಸಮಯದಲ್ಲಿ ನಡೆದ ಈ ಒಂದು ಘಟನೆ ನಿಜಕ್ಕೂ ಭಯ ಹುಟ್ಟಿಸುತ್ತಿದೆ. ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ. ಈ ಘಟನೆಯಿಂದ   ಸಿಲಿಕಾನ್​ ಸಿಟಿಯಲ್ಲಿ ಮಹಿಳೆಯರಿಗೆ ಸೇಫ್ಟಿನೇ ಇಲ್ವಾ? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ.

ಅಂದಾಗೆ ಈ ಘಟನೆ ನಡೆದಿರೋದು ಕಳೆದ ಶುಕ್ರವಾರ. ಕೋಣನಕುಂಟೆ ಬಳಿಯ ಕೃಷ್ಣಾ ನಗರದಲ್ಲಿ ರಸ್ತೆ ಬದಿ ವಾಕ್​ ಮಾಡಲು ನಿಂತಿದ್ದ ಮಹಿಳೆ ಕಾಮುಕನೊಬ್ಬ ಕಾಟ ಕೊಟ್ಟಿದ್ದಾನೆ. ಮಹಿಳೆಗೆ ಗೊತ್ತಾಗದಂತೆ ಆಕೆಯ ಬಳಿ ತನ್ನ ವಿಕೃತಿ ತೋರಿದ್ದಾನೆ. ನಂತರ ಆಕೆ ತಪ್ಪಿಸಿಕೊಂಡು ಬಂದರೂ ಸಹ ನಡುರಸ್ತೆಯಲ್ಲೇ ಮಹಿಳೆ ಜೊತೆ ಅಸಭ್ಯ ವರ್ತನೆ ತೋರಿದ್ದಾನೆ. ಈ ವೇಳೆ ಕಾಮುಕನ ಕೈಯಿಂದ ತಪ್ಪಿಸಿಕೊಂಡ ಮಹಿಳೆ ರಕ್ಷಣೆಗಾಗಿ ಕಿರುಚಾಡಿದ್ದಾಳೆ. ಆಗ ಸ್ಥಳದಿಂದ ಕಾಮುಕ ಎಸ್ಕೇಪ್​ ಆಗಿದ್ದಾನೆ.

ಈ ಘಟನೆ ಆಗಸ್ಟ್ 02ರ ಬೆಳಗಿನ ಜಾವ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಕಾಮುಕನ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್​ – ಐದು ತಿಂಗಳ ಬಳಿಕ ಆರೋಪಿಗಳನ್ನು ಕರೆತಂದು ಸ್ಥಳ ಮಹಜರು..!

 

 

 

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here