ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ರೋಡ್ ರೇಜ್ ಪ್ರಕರಣ ಮುಂದುವರಿದೆ. ಕಾರಿನಲ್ಲಿ ತೆರಳುತ್ತಿದ್ದ ಕುಟುಂಬದ ಮೇಲೆ ಪುಂಡರು ಗೂಂಡಾ ವರ್ತನೆ ತೋರಿದ ಘಟನೆ ಬೆಂಗಳೂರಿನ ಕಸವನಹಳ್ಳಿ ಬಳಿ ನಡೆದಿದೆ. ಸದ್ಯ ರೋಡ್ ರೇಜ್ ಕೇಸ್ನ ವಿಡಿಯೋ ವೈರಲ್ ಆಗುತ್ತಿದೆ.
ವ್ಯಕ್ತಿಯೊಬ್ಬರು ಕುಟುಂಬಸ್ಥರ ಜೊತೆ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಕಾರನ್ನು ಫಾಲೋ ಮಾಡಿಕೊಂಡು ಬಂದ ದುಷ್ಕರ್ಮಿಗಳು ಕಿರಿಕ್ ತೆಗೆದಿದ್ದಾರೆ. ಅಷ್ಟೇ ಅಲ್ಲದೆ ಕಾರನ್ನ ಅಡ್ಡಗಟ್ಟಿ ಕಾರು ಗ್ಲಾಸ್ ಓಪನ್ ಮಾಡುವಂತೆ ಅವಾಜ್ ಹಾಕಿದ್ದಾರೆ.
ಪುಂಡರು ಕಾರು ಫಾಲೋ ಮಾಡಿ ಗೂಂಡಾ ವರ್ತನೆ ತೋರಿದ ಪರಿಣಾಮ ಕಾರಿನಲ್ಲಿದ್ದ, ಮಕ್ಕಳಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಇನ್ನು ಘಟನೆಯ ಸಂಬಂಧ ಬೆಳ್ಳಂದೂರು ಪೊಲೀಸ್ಯಲ್ಲಿ ದೂರು ದಾಖಲಿಸಿದ್ದಾರೆ. ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ – ಹೂವು, ಹಣ್ಣು, ಪಟಾಕಿ ಖರೀದಿಗೆ ಮುಗಿಬಿದ್ದ ಜನರು..!
Post Views: 89