Download Our App

Follow us

Home » ಅಪರಾಧ » ಬೆಂಗಳೂರಲ್ಲಿ ಬೀಭತ್ಸಕರ ಕೊ*ಲೆ ಪ್ರಕರಣ ಬೆಳಕಿಗೆ – ಮನೆಯಲ್ಲೇ ವ್ಯಕ್ತಿಯನ್ನು ತುಂಡುತುಂಡಾಗಿ ಕತ್ತರಿಸಿದ ಪಾಪಿ..!

ಬೆಂಗಳೂರಲ್ಲಿ ಬೀಭತ್ಸಕರ ಕೊ*ಲೆ ಪ್ರಕರಣ ಬೆಳಕಿಗೆ – ಮನೆಯಲ್ಲೇ ವ್ಯಕ್ತಿಯನ್ನು ತುಂಡುತುಂಡಾಗಿ ಕತ್ತರಿಸಿದ ಪಾಪಿ..!

ಬೆಂಗಳೂರು : ಬೆಂಗಳೂರಿ‌ನಲ್ಲೊಂದು ಬೀಭತ್ಸಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರನ್ನು ಆರೋಪಿ ಮನೆಯಲ್ಲೇ ತುಂಡುತುಂಡಾಗಿ ಕತ್ತರಿಸಿ ಹತ್ಯೆ ಮಾಡಿದ್ದಲ್ಲದೆ, ಮೃತದೇಹದ ಭಾಗಗಳನ್ನು ಬೇರೆ ಬೇರೆ ಮೋರಿಗೆ ಎಸೆದು ಸಾಕ್ಷ್ಯ ನಾಶ ಮಾಡಿರುವುದು ಪತ್ತೆಯಾಗಿದೆ. 3 ದಿನಗಳಿಂದ ಹುಡುಕಿದರೂ ಮೃತದೇಹ ಇನ್ನೂ ಪತ್ತೆಯಾಗಿಲ್ಲ.

ಕೊಲೆಯಾದ ದುರ್ದೈವಿ  34 ವರ್ಷದ ಕೆ.ವಿ.ಶ್ರೀನಾಥ್ಎಂಬುದು ತಿಳಿದುಬಂದಿದೆ. ಮಾಧವ ರಾವ್ ಎಂಬಾತನೇ ಕೊಲೆ ಆರೋಪಿಯಾಗಿದ್ದು, ಸಂಪಿಗೆಹಳ್ಳಿ ಪೊಲೀಸರು ಭಯಾನಕ ಕೊಲೆಯ ಕೃತ್ಯವನ್ನು ಬಯಲಿಗೆಳೆದಿದ್ದಾರೆ.

ಪ್ರಕರಣದ ಹಿನ್ನೆಲೆ :

ಥಣಿಸಂದ್ರದ ಅಂಜನಾದ್ರಿ ಲೇಔಟ್​​ನಲ್ಲಿ ವಾಸವಿದ್ದ ಶ್ರೀನಾಥ್ ಬಸವೇಶ್ವರನಗರದಲ್ಲಿ ಚೀಟ್ ಫಂಡ್​​ನಲ್ಲಿ ಡೆವಲಪ್ಮೆಂಟ್ ಆಫೀಸರ್ ಆಗಿದ್ದ. ಮೇ 28ರ ಬೆಳಗ್ಗೆ ಮನೆಯಿಂದ ಹೊರಹೋಗಿದ್ದ ಶ್ರೀನಾಥ್ ಮನೆಗೆ ವಾಪಸ್ ಆಗಿಲ್ಲ. ಶ್ರೀಕಾಂತ್ ನಾಪತ್ತೆ ಬಗ್ಗೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ಅವರ ಪತ್ನಿ ದೂರು ನೀಡಿದ್ದರು. ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರಿಗೆ ಶ್ರೀನಾಥ್  ಮಾಧವರಾವ್ ಮನೆಗೆ ಹೋಗಿರುವುದು ಪತ್ತೆಯಾಗಿತ್ತು.

ಮನೆಯ ಸಿಸಿಟಿವಿಯಲ್ಲಿ ಶ್ರೀನಾಥ್ ಕೆಆರ್ ಪುರಂನ ವಿಜಿನಪುರದಲ್ಲಿರುವ ಮಾಧವ ರಾವ್ ಮನೆಗೆ ಹೋಗಿರುವುದು ತಿಳಿದುಬಂದಿತ್ತು. ಆದರೆ ಶ್ರೀನಾಥ್ ಮನೆಯಿಂದ ಹೊರಗೆ ಹೋಗುವುದು ರೆಕಾರ್ಡ್ ಆಗಿರಲಿಲ್ಲ. ಹೀಗಾಗಿ ಮನೆಯ ಒಳಗಡೆ ಪರಿಶೀಲನೆ ಮಾಡಿದಾಗ ರಕ್ತದ ಕಲೆಗಳು ಪತ್ತೆಯಾಗಿದ್ದವು. ನಂತರ ಮಾಧವ ರಾವ್ ಬಗ್ಗೆ ವಿಚಾರಿಸಿದಾಗ ಆತನೂ ನಾಪತ್ತೆಯಾಗಿರುವುದು ಗೊತ್ತಾಗಿತ್ತು. ಬಳಿಕ ಆಂಧ್ರಪ್ರದೇಶದಲ್ಲಿ ಮಾಧವರಾವ್ ಪತ್ತೆ ಮಾಡಿ ಪೊಲೀಸರು ಕರೆತಂದಿದ್ದರು. ಪೊಲೀಸರ ವಿಚಾರಣೆ ವೇಳೆ  ಮಾಧವರಾವ್ ಅಸಲಿ ಕಥೆ ತೆರೆದಿಟ್ಟಿದ್ದಾನೆ.

ಮಾಧವ ರಾವ್ ಮತ್ತು ಶ್ರೀನಾಥ್​ಗೆ ಎರಡು ವರ್ಷಗಳಿಂದ ಪರಿಚಯ ಇತ್ತು. ಶ್ರೀನಾಥ್ ಬಳಿ ಮಾಧವರಾವ್ 5 ಲಕ್ಷ ರೂ. ಹಣದ ಚೀಟಿ ಹಾಕಿದ್ದ. ಈ ಚೀಟಿ ಹಣದ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಚೀಟಿ ಹಣ ವಾಪಸ್ ಕೊಡುವಂತೆ ಶ್ರೀನಾಥ್ ಒತ್ತಾಯ ಮಾಡುತ್ತಿದ್ದ. ಹೀಗಾಗಿ ಮೇ.28ರಂದುಮಾಧವ ರಾವ್ ಮನೆಗೆ ಶ್ರೀಕಾಂತ್ ತೆರಳಿದ್ದ. ಈ ವೇಳೆ ಮನೆಯಲ್ಲಿ ಇಬ್ಬರಿಗೂ ಹಣದ ವಿಚಾರಕ್ಕೆ ಗಲಾಟೆ ಆಗಿದೆ. ಬಳಿಕ ಮಾಧವ ರಾವ್ ಮನೆಯಲ್ಲಿದ್ದ ಜಾಕ್, ರಾಡ್​​ನಿಂದ ಶ್ರೀನಾಥ್ ತಲೆಗೆ ಹೊಡೆದಿದ್ದ. ಕುಸಿದು ಬಿದ್ದ ಶ್ರೀನಾಥ್ ದೇಹವನ್ನು ಮಚ್ಚಿನಿಂದ ತುಂಡು ತುಂಡಾಗಿ ಕತ್ತರಿಸಿ, ಸಾಕ್ಷಿ ನಾಶ ಮಾಡಲು ಮೃತದೇಹವನ್ನು ಮೂರು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ. ಬಳಿಕ ಮೃತದೇಹದ ತುಂಡುಗಳನ್ನು ಬೆಳತ್ತೂರು ಬಳಿಯ ಮೋರಿಯಲ್ಲಿ ಹಾಕಿ, ಮೊಬೈಲ್ ಸ್ವಿಚ್ಡ್ ಆಫ್ ಮಾಡಿ ಮಾಧವರಾವ್ ಆಂಧ್ರಕ್ಕೆ ಎಸ್ಕೇಪ್​ ಆಗಿದ್ದ.

ಸದ್ಯ ಪ್ರಕರಣ ರಾಮಮೂರ್ತಿನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು, ಪೊಲೀಸರಿಂದ ಕೊಲೆ 302, ಸಾಕ್ಷಿ ನಾಶ 201 ರಡಿ ಕೇಸ್ ದಾಖಲಾಗಿದೆ. ರಾಮಮೂರ್ತಿನಗರ ಪೊಲೀಸರಿಂದ  ಮೃತದೇಹದ ತುಂಡುಗಳಿಗೆ ಹುಡುಕಾಟ ನಡೆದಿದೆ. ಕಳೆದ ಮೂರು ದಿನಗಳಿಂದ ಹುಡುಕಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಮೋರಿಯಲ್ಲಿ ಮೃತದೇಹದ ತುಂಡುಗಳು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ. ಮೃತದೇಹ ಹುಡುಕಲು ಮಂಗಳೂರಿನಿಂದ ನುರಿತರನ್ನು ಕರೆಸಿದರೂ ಮೃತದೇಹದ ಪತ್ತೆಯಾಗಿಲ್ಲ.

ಇದನ್ನೂ ಓದಿ : ಡಿ.ಕೆ.ಸುರೇಶ್ ಸೋಲಿಗೆ ಸಿದ್ದರಾಮಯ್ಯ ಅಂಡ್ ಟೀಮ್ ಕಾರಣ : ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ..!

Leave a Comment

DG Ad

RELATED LATEST NEWS

Top Headlines

ಅಟ್ರಾಸಿಟಿ ಕೇಸ್​​ ಇದ್ರೂ ಅರೆಸ್ಟ್ ಆಗಿಲ್ಲ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್ – FIR ಆಗಿದ್ರೂ ಸಸ್ಪೆಂಡ್‌ ಮಾಡದೆ ರಕ್ಷಣೆ ಮಾಡ್ತಿರೋದ್ಯಾಕೆ?

ಆನೇಕಲ್​​ : ಭೂ ವಿವಾದಕ್ಕೆ ಸಂಬಂಧಿಸಿದಂತೆ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್​​​ ಜೆಸಿಬಿಯನ್ನೂ ತೆಗೆದುಕೊಂಡು ಹೋಗಿ ಟಾರ್ಚರ್ ಕೊಟ್ಟಿದ್ದ ಘಟನೆಯೊಂದು ನಡೆದಿತ್ತು. ಈ ಪ್ರಕರಣಕ್ಕೆ ಮಂಜೇಶ್​​​ ವಿರುದ್ದ

Live Cricket

Add Your Heading Text Here