Download Our App

Follow us

Home » ಮೆಟ್ರೋ » ಬೆಂಗಳೂರು : ಕೆರೆಯಲ್ಲಿ ಈಜಲು ಹೋಗಿ ಇಬ್ಬರು SSLC ವಿದ್ಯಾರ್ಥಿಗಳು ಸಾ*ವು..!

ಬೆಂಗಳೂರು : ಕೆರೆಯಲ್ಲಿ ಈಜಲು ಹೋಗಿ ಇಬ್ಬರು SSLC ವಿದ್ಯಾರ್ಥಿಗಳು ಸಾ*ವು..!

ಬೆಂಗಳೂರು : ಈಜಲು ಬಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಆಗರ ಕೆರೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಕೆಂಗೇರಿ ಉಪನಗರ ಸರ್ಕಾರಿ ಪ್ರೌಢ ಶಾಲೆಯ ಒಟ್ಟು 11 ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಆಗರ ಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ಈಜಲು ನೀರಿಗೆ ಇಳಿದಿದ್ದ ಇಬ್ಬರು ಮುಳುಗಿ ಮೃತಪಟ್ಟಿದ್ದಾರೆ.

ದೊಡ್ಡಬೆಲೆ ಮೂಲದ ಪೃಥ್ವಿರಾಜ್, ನವೀನ್ ಮೃತ ವಿದ್ಯಾರ್ಥಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ. ಮೃತ ದೇಹಗಳನ್ನು ಕೆರೆಯಿಂದ ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ :  ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದ NIA..!

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here