ಭಾರತದ ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮೀಸಲಾತಿ ಸಂಘರ್ಷ ತಾರಕಕ್ಕೇರಿದ್ದು, ಪ್ರಧಾನಿ ಶೇಖ್ ಹಸೀನಾ ದೇಶ ತೊರೆದು ಸುರಕ್ಷಿತ ಪ್ರದೇಶಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಆದರೆ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪುಂಡರು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿ ವಿಕೃತಿ ಮೆರೆದಿದ್ದಾರೆ.
ಹಸೀನಾ ನಿನ್ನೆ ದೇಶ ತೊರೆದು ಹಿಂಡನ್ ಏರ್ಪೋರ್ಟ್ಗೆ ಬಂದಿದ್ದರು. ಪ್ರಧಾನಿ ದೇಶ ತೊರೆದ್ರೂ ಬಾಂಗ್ಲಾದಲ್ಲಿ ಹಿಂಸಾಚಾರ ನಿಲ್ಲಲಿಲ್ಲ. ಮೀಸಲು ಧಂಗೆಗೆ ಬಾಂಗ್ಲಾದೇಶ ಹೊತ್ತಿ ಉರಿಯುತ್ತಿದ್ದು, ಹಿಂದೂಗಳನ್ನು ಟಾರ್ಗೆಟ್ ಮಾಡಿ ಹಿಂಸಾಚಾರ ಮಾಡುತ್ತಿದ್ದಾರೆ. ಪ್ರತಿಭಟನಕಾರರು ದೇಗುಲಗಳು, ಸಮುದಾಯಭವನಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಇದೀಗ ಹಿಂದೂ ಧರ್ಮೀಯರು ಬಾಂಗ್ಲಾ ತೊರೆಯುತ್ತಿದ್ದಾರೆ.
ಮೀಸಲಾತಿಗೆ ಹೋರಾಟ ನಡೆಸುತ್ತಿದ್ದ ಉದ್ರಿಕ್ತರು ಪ್ರಧಾನಿ ನಿವಾಸಕ್ಕೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೆ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ಬಾಂಗ್ಲಾ ಸೇನೆ ಗಡುವು ನೀಡಿತ್ತು. ಹಾಗಾಗಿ 15 ವರ್ಷಗಳ ಪ್ರಧಾನಿ ಹುದ್ದೆಗೆ ರಾಜೀನಾಮೆ ಕೊಟ್ಟು ಹಸೀನಾ ಸುರಕ್ಷಿತ ಪ್ರದೇಶದಲ್ಲಿದ್ದಾರೆ.
ಢಾಕಾದಲ್ಲಿ ಪ್ರಧಾನಿ ಮನೆಗೆ ನುಗ್ಗಿ ಧಂಗೆಕೋರರ ಅಟ್ಟಹಾಸ ಮೆರೆದಿದ್ದು, ಪುಂಡರು ಮನೆಯಲ್ಲಿದ್ದ ಸಿಕ್ಕ-ಸಿಕ್ಕದ್ದನ್ನು ದೋಚಿದ್ದಾರೆ. ದೇಶಾದ್ಯಂತ ಹಿಂಸಾಚಾರಕ್ಕೆ 300ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ಬಾಂಗ್ಲಾ ಹಿಂಸಾಚಾರದಲ್ಲಿ ಪಾಕಿಸ್ತಾನ ಕೈವಾಡದ ಶಂಕೆ ವ್ಯಕ್ತವಾಗಿದೆ. ಜಮಾತ್ ಎ ಇಸ್ಲಾಮಿ ಸಂಘಟನೆಯಿಂದಾಗಿ ಹೋರಾಟ ತೀವ್ರಗೊಂಡಿದ್ದು, ಜಮಾತ್ ಎ ಇಸ್ಲಾಮಿ ಸಂಘಟನೆಗೆ ಪಾಕ್ ಲಿಂಕ್ ಇರೋ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ : ‘ಸಮಾಜದಲ್ಲಿ ಸೇವೆ ಮಾಡಿದ ನನಗಿಂತ ಹಿರಿಯರಿದ್ದಾರೆ’ ಅವರಿಗೆ ನೀಡಿ – ಗೌರವ ಡಾಕ್ಟರೇಟ್ ನಿರಾಕರಿಸಿದ ಕಿಚ್ಚ ಸುದೀಪ್..!