Download Our App

Follow us

Home » ಮೆಟ್ರೋ » ಬೆಂಗಳೂರಿನ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಭಾರೀ ಅಗ್ನಿ ದುರಂತ : ಕೋಟ್ಯಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ..!

ಬೆಂಗಳೂರಿನ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಭಾರೀ ಅಗ್ನಿ ದುರಂತ : ಕೋಟ್ಯಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ..!

ಬೆಂಗಳೂರು : ಬೆಂಗಳೂರು ಹೊರವಲಯದ ಕೊತ್ತನೂರು ವ್ಯಾಪ್ತಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೈರತಿ ಬಳಿಯ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಕೋಟ್ಯಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಈ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೋದಾಮಿನಲ್ಲಿ ಡಿ ಮಾರ್ಟ್ ಸೇರಿದಂತೆ ಪ್ರತಿಷ್ಠಿತ ಸೂಪರ್ ಮಾರ್ಕೆಟ್ ಗಳಿಗೆ ಸಾಗಿಸುವ ಸಾಮಗ್ರಿಗಳನ್ನು ಸಂಗ್ರಹಿಸಲಾಗಿತ್ತು. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ. 8ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಮತ್ತು 20ಕ್ಕೂ ಹೆಚ್ಚು ಸಿಬ್ಬಂದಿಯಿಂದ ಬೆಂಕಿ ನಂದಿಸಲಾಗಿದೆ.

ಇದನ್ನೂ ಓದಿ : ಬೆಂಗಳೂರಲ್ಲಿ ತೀವ್ರಗೊಂಡ ನೀರಿನ ಸಮಸ್ಯೆ – ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವು..!

ಉಡುಪಿ : 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶವಿದೆ. ಹಾಗಾಗಿ ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಪಿ.ಯಶೋಧಾ ನಾರಾಯಣ ಉಪಾಧ್ಯ

Live Cricket

Add Your Heading Text Here