ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮುಂಜಾನೆಯಿಂದಲೇ ಮಳೆ ಜೋರಾಗಿದ್ದು, ಕೆಲಸ- ಕಾಲೇಜಿಗೆ ಹೋಗ್ತಾ ಇರುವವರು ಪರದಾಟ ನಡೆಸಿದ್ದಾರೆ. ಆಗ್ನೇಯ ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ನಿರಂತರ ಮಳೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ನಾಳೆ(ಅಕ್ಟೋಬರ್ 16) ಬೆಂಗಳೂರಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಜಧಾನಿಯಲ್ಲಿ ವ್ಯಾಪಕ ಮಳೆ ಹಿನ್ನಲೆಯಲ್ಲಿ ಅಕ್ಟೋಬರ್ 16ರಂದು ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದ್ದಾರೆ.
ಇದನ್ನೂ ಓದಿ : ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ..!
Post Views: 162