ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗೇಟ್ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಜೆಡಿಎಸ್ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಜೆಡಿಎಸ್ ಮುಖಂಡ, ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಕೊಲೆಯಾದ ದುರ್ದೈವಿ.
ಕೊಲೆಯಾದ ವೆಂಕಟೇಶ್ ಶುಕ್ರವಾರ (ಜ.03) ಟಿವಿಎಸ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ತಮ್ಮನಾಯಕನಹಳ್ಳಿ ಗೇಟ್ನಿಂದ ಮನೆಗೆ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಕೊಚ್ಚಿ ವೆಂಕಟೇಶ್ರನ್ನು ಕೊಲೆ ಮಾಡಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಸಿ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಸೇರಿದಂತೆ ಸೋಕೋ ತಂಡ ಪರಿಶೀಲನೆ ನಡೆಸಿದೆ.
ಇದನ್ನೂ ಓದಿ : BTV ಬಿಗ್ ಇಂಪ್ಯಾಕ್ಟ್ – ಜಸ್ಟ್ 12 ಗಂಟೆಯಲ್ಲೇ DySP ಅರೆಸ್ಟ್ – ಕಡು ಭ್ರಷ್ಟ, ಹೆಣ್ಣುಬಾಕ ರಾಮಚಂದ್ರಪ್ಪ ಆಟಾಟೋಪಕ್ಕೂ ಬ್ರೇಕ್!
Post Views: 216