ಬೆಂಗಳೂರು : ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಅಕ್ಟೋಬರ್ 15ರ ಬಳಿಕ ರಾಜ್ಯಕ್ಕೆ ಸೈಕ್ಲೋನ್ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅಕ್ಟೋಬರ್ 15ರ ಬಳಿಕ ಧಾರಕಾರ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಲಾಗಿದೆ.
ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಅಕ್ಟೋಬರ್ 17 ರಿಂದ 18ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಸಹ ಅಕ್ಟೋಬರ್ 17 ರಂದು ಯೆಲ್ಲೋ ಅಲರ್ಟ್ ಇರಲಿದೆ.
ಸಿಲಿಕಾನ್ ಸಿಟಿಯಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ : ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ : ಬಿಗ್ಬಾಸ್ಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್.. ಈ ದಿಢೀರ್ ನಿರ್ಧಾರಕ್ಕೆ ಕಾರಣವೇನು?