Download Our App

Follow us

Home » ಜಿಲ್ಲೆ » KRS ಡ್ಯಾಂ ಬಳಿ ನೀರಿನ ರಭಸಕ್ಕೆ ತಡೆಗೋಡೆ ಕುಸಿತ – ಕಳಪೆ ಕಾಮಗಾರಿ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ..!

KRS ಡ್ಯಾಂ ಬಳಿ ನೀರಿನ ರಭಸಕ್ಕೆ ತಡೆಗೋಡೆ ಕುಸಿತ – ಕಳಪೆ ಕಾಮಗಾರಿ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ..!

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಕೆಲ ದಿನಗಳಿಂದ ಧಾರಕಾರ ಮಳೆ ಹಿನ್ನೆಲೆಯಲ್ಲಿ ಹಳೇ ಮೈಸೂರು ಭಾಗದ ರೈತರ ಜೀವನಾಡಿ ಕೆ.ಆರ್.ಎಸ್ ಜಲಾಶಯ ಎರಡು ವರ್ಷಗಳ ಬಳಿಕ ಭರ್ತಿಯಾಗಿದೆ. ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರನ್ನ ಕಾವೇರಿ ನದಿಗೆ ಹರಿಬಿಡಲಾಗಿದೆ. ಇದರ ನಡುವೆ ಇದೀಗ KRS ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿದಿದೆ.

ಕೆಆರ್​ಎಸ್​ ಡ್ಯಾಂನಿಂದ ನೀರು ಬಿಡುಗಡೆ ವೇಳೆ ನಗುವನದ ಎದುರಿನ ಅಣೆಕಟ್ಟೆ ಗೇಟ್ ತೆಗೆದು ನೀರು ಬಿಟ್ಟ ಹಿನ್ನೆಲೆ ಗೋಡೆ ಕುಸಿದಿದೆ. ನೀರಿನ ರಭಸಕ್ಕೆ ನಗುವನ ತೋಟದ ತಡೆಗೋಡೆ ಕೊಚ್ಚಿಹೋಗಿದ್ದು, ನೀರು ಬಿಟ್ಟ ಕೆಲ ತಾಸಿನಲ್ಲೇ ತಡೆಗೋಡೆ ಕುಸಿದಿದೆ. ತಕ್ಷಣ ಎಚ್ಚೆತ್ತ ಅಧಿಕಾರಿಗಳು ಆ ಗೇಟ್​ನ ನೀರು ನಿಲ್ಲಿಸಿದ್ದಾರೆ.

ನೀರು ಬಿಟ್ರೆ ಪಕ್ಕದ ತೋಟಕ್ಕೆ ತೊಂದರೆ ಆಗಬಾರದೆಂದು ಈ ತಡೆಗೋಡೆ ಕಟ್ಟಲಾಗಿತ್ತು. ಇತ್ತೀಚೆಗಷ್ಟೇ ಲಕ್ಷಾಂತರ ರೂ. ವೆಚ್ಚದಲ್ಲಿ ಈ ತಡೆಗೋಡೆ ನಿರ್ಮಿಸಲಾಗಿತ್ತು. ಗೇಟ್​ನಿಂದ ಒಮ್ಮೆಯೇ ಹೆಚ್ಚಿನ ನೀರು ಬಿಟ್ಟಿದ್ದರಿಂದ ಗೋಡೆ ಕುಸಿದಿದೆ. ಕಳಪೆ ಕಾಮಗಾರಿ, ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ತಡೆಗೋಡೆ ಕುಸಿದಿದೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಮತ್ತೆ ತಡೆಗೋಡೆ ಕುಸಿಯುವ ಸಾಧ್ಯತೆ ಇದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂದು ಜನರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಡಿಸಿಎಂ ಡಿ.ಕೆ ಶಿವಕುಮಾರ್​ನ್ನು ಭೇಟಿಯಾದ ದರ್ಶನ್​​ ಪತ್ನಿ ವಿಜಯಲಕ್ಷ್ಮಿ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here