Download Our App

Follow us

Home » ಮೆಟ್ರೋ » ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ – ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರು ಸಾವು..!

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ – ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರು ಸಾವು..!

ಬೆಂಗಳೂರು : ಬಿಬಿಎಂಪಿಯ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಕೆ.ಆರ್.ಸರ್ಕಲ್ ಬಳಿ ನಿನ್ನೆ ರಾತ್ರಿ ನಡೆದಿದೆ. ಪ್ರಶಾಂತ್ (25), ಶಿಲ್ಪ ಮೃತ ದುರ್ದೈವಿಗಳು.

ನಿನ್ನೆ ರಾತ್ರಿ 8.45ರ ಸುಮಾರಿಗೆ ಈ ಭೀಕರ ಅಪಘಾತ ನಡೆದಿದೆ. 25 ವರ್ಷದ ಪ್ರಶಾಂತ್ ಮೂಲತಃ ಬೆಂಗಳೂರಿನ ಯುವಕ. ಪ್ರಶಾಂತ್ ಮತ್ತು ಯುವತಿ ಶಿಲ್ಪ ಇಬ್ಬರು ಕೂಡ ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪಿಜಿಯಲ್ಲಿ ವಾಸ ಮಾಡ್ತಿದ್ದ ಮೃತ ಶಿಲ್ಪ(27) ಆಂಧ್ರ ಪ್ರದೇಶದವರು ಎಂದು ತಿಳಿದು ಬಂದಿದೆ.

ಊಟಕ್ಕೆ ಎಂದು ಹೊರಗೆ ಬಂದಾಗ ಅಪಘಾತ ಸಂಭವಿಸಿದ್ದು, ಮೆಜೆಸ್ಟಿಕ್​​ನಿಂದ ಕೆ.ಆರ್.ಸರ್ಕಲ್ ಮಾರ್ಗವಾಗಿ ಬೈಕ್​ನಲ್ಲಿ ಬರುತ್ತಿದ್ದಾಗ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದಿದೆ. ಸಿಐಡಿ ಸಿಗ್ನಲ್ ಮಾರ್ಗದಿಂದ ಕೆ.ಆರ್.ಸರ್ಕಲ್ ಕಡೆ ವೇಗವಾಗಿ ಬಂದ ಕಸದ ಲಾರಿ, ಏಕಾಏಕಿಯಾಗಿ ಬಂದು ಗುದ್ದಿದೆ.

ಮೃತರ ಮೇಲೆ ಹರಿದು ಲಾರಿ ಸುಮಾರು 10 ಮೀಟರ್ ನಷ್ಟು ದೂರ ದೇಹಗಳನ್ನ ಎಳೆದೊಯ್ದಿದೆ. ಕೂಡಲೇ ಅಪಘಾತಕ್ಕೊಳಗಾದ ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ ನಡೆದಿತ್ತು, ಆದರೆ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ. ಸೇಂಟ್​ ಮಾರ್ತಾಸ್​ ಶವಾಗಾರಕ್ಕೆ ಮೃತದೇಹಗಳು ಶಿಫ್ಟ್ ಮಾಡಲಾಗಿದ್ದು, ಹಲಸೂರುಗೇಟ್ ಟ್ರಾಫಿಕ್​​ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಇದನ್ನೂ ಓದಿ : ಎರಡು ವರ್ಷದ ನಂತರ ತುಂಬಿ ತುಳುಕುತ್ತಿರುವ KRS ಡ್ಯಾಂ – ಇಂದು ಸಿಎಂ ಸಿದ್ದರಾಮಯ್ಯರಿಂದ ಬಾಗಿನ ಅರ್ಪಣೆ..!

Leave a Comment

DG Ad

RELATED LATEST NEWS

Top Headlines

ಕಾಸ್ಟಿಂಗ್​​ ಕೌಚ್​ ಸುನಾಮಿ – ಇಂದು ಮಹಿಳಾ ಆಯೋಗದಿಂದ ಫಿಲ್ಮ್​​ ಚೇಂಬರ್​​ನಲ್ಲಿ ಮೆಗಾ ಮೀಟಿಂಗ್​..!

ಬೆಂಗಳೂರು : ಈಗಾಗಲೇ ಮಾಲಿವುಡ್‌ನಲ್ಲಿ ಹೇಮಾ ವರದಿ ಸುನಾಮಿ ಎಬ್ಬಿಸಿದ್ದು, ಕೇರಳದಲ್ಲಿ ಎದ್ದಿರೋ ಈ ಸುನಾಮಿ ಈಗ ಸ್ಯಾಂಡಲ್​ವುಡ್​​​ಗೂ ಬಂದಪ್ಪಳಿಸುವಂತಿದೆ. ಫಿಲ್ಮ್ ಚೇಂಬರ್‌ನಲ್ಲಿ ಇಂದು ಮೆಗಾ ಮೀಟಿಂಗ್

Live Cricket

Add Your Heading Text Here