Download Our App

Follow us

Home » ಸಿನಿಮಾ » ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ “ಅಧ್ಯಾಯ” ಆರಂಭ..!

ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ “ಅಧ್ಯಾಯ” ಆರಂಭ..!

ಜೈಭವಾನಿ ಕ್ರಿಯೇಷನ್ಸ್ ಲಾಂಛನದಲ್ಲಿ ಶಾಂತ ಜಯರಾಂ ಅವರು ನಿರ್ಮಿಸುತ್ತಿರುವ ಹಾಗೂ ಸಮರ್ಥ್ ಎಂ ನಿರ್ದೇಶನದಲ್ಲಿ ಚೈತನ್ಯ ಬಂಜಾರ ಅವರು ನಾಯಕನಾಗಿ ನಟಿಸುತ್ತಿರುವ “ಅಧ್ಯಾಯ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕಿ ಶಾಂತ ಜಯರಾಂ ಅವರು ಆರಂಭಫಲಕ ತೋರಿದರು. ಅಣಜಿ ನಾಗರಾಜ್ ಕ್ಯಾಮರಾ ಚಾಲನೆ ಮಾಡಿದರು. ಚಿತ್ರರಂಗದ ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

“ಅಧ್ಯಾಯ” ಶಿಕ್ಷಣ ವ್ಯವಸ್ಥೆಯ ಕುರಿತಾದ ಸಿನಿಮಾ. ಕನ್ನಡ ಹಾಗೂ ಬಂಜಾರ ಭಾಷೆಗಳಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಶಿಕ್ಷಣದಿಂದ ವಂಚಿತರಾಗಿದ್ದ ಬುಡಕಟ್ಟು ಜನಾಂಗದ ಮಕ್ಕಳು ವಿದ್ಯಾವಂತರಾದ ಮೇಲೆ ಏನೆಲ್ಲಾ ಆಗುತ್ತದೆ? ಎಂಬುದೆ ಈ ಚಿತ್ರದ ಕಥಾಸಾರಾಂಶ. “ಅಧ್ಯಾಯ” ಕಮರ್ಷಿಯಲ್ ಚಿತ್ರವಾಗಿದ್ದು, ಆಕ್ಷನ್, ಸೆಂಟಿಮೆಂಟ್, ಸಸ್ಪೆನ್ಸ್, ಕಾಮಿಡಿ ಸೇರಿದಂತೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಚಿತ್ರದಲ್ಲಿರುತ್ತದೆ. ನಿರ್ದೇಶಕ ಸಮರ್ಥ್ ಅವರೆ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆಯನ್ನು ಹರೀಶ್ ಗೌಡ ಬರೆದಿದ್ದಾರೆ. ಕನ್ನಡದಲ್ಲಿ ಈಗಾಗಲೇ “ರುಧೀರ ಕಣಿವೆ” ಸೇರಿದಂತೆ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಸಮರ್ಥ್ ಅವರಿಗೆ ಇದು ನಾಲ್ಕನೇ ಚಿತ್ರ. ಮೇ ಹತ್ತರಿಂದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

ಚೈತನ್ಯ ಬಂಜಾರ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಶೋಭ್ ರಾಜ್, ಬಲ ರಾಜವಾಡಿ, ನಾಗೇಂದ್ರ ಅರಸ್, ಯತಿರಾಜ್, ನಿರಂಜನ್, ದತ್ತಾತ್ರೇಯ, ಪ್ರಹ್ಲಾದ್, ಜಯರಾಮ್ ಮುಂತಾದವರಿದ್ದಾರೆ.

ಐದು ಹಾಡುಗಳಿರುವ ಈ ಚಿತ್ರಕ್ಕೆ ಹರ್ಷ ಕೊಗೋಡು ಸಂಗೀತ ನೀಡಲಿದ್ದಾರೆ. ಭರತ್ ಛಾಯಾಗ್ರಹಣ ಹಾಗೂ ಸುನಯ್ ಎಸ್ ಜೈನ್ ಸಂಕಲನವಿರುವ “ಅಧ್ಯಾಯ” ಚಿತ್ರದಲ್ಲಿ ಐದು ಸಾಹಸ ಸನ್ನಿವೇಶಗಳಿದ್ದು, ಚಂದ್ರು ಬಂಡೆ ಹಾಗೂ ಅಶೋಕ್ ಸಾಹಸ ನಿರ್ದೇಶನ ಮಾಡಲಿದ್ದಾರೆ.

ಇದನ್ನೂ ಓದಿ : ‘ರುದ್ರ ಗರುಡ ಪುರಾಣ’ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್​​ಕುಮಾರ್..!

Leave a Comment

RELATED LATEST NEWS

Top Headlines

ಪಠಾಣ್​ ಸಿನಿಮಾಗೆ ಸೆಡ್ಡು ಹೊಡೆದ ಕೆಡಿ : ದುಬಾರಿ ಮೊತ್ತಕ್ಕೆ ಚಿತ್ರದ ಆಡಿಯೋ ರೈಟ್ಸ್ ಸೇಲ್..!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾದ ರಿಲೀಸ್ ಡೇಟ್​​ನ್ನು ಇತ್ತೀಚೆಗಷ್ಟೆ ಘೋಷಿಸಲಾಗಿದೆ. ಅದರ ಬೆನ್ನಲೇ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಬಿಡುಗಡೆ ಬಗ್ಗೆ

Live Cricket

Add Your Heading Text Here