ಬೆಳಗಾವಿ : ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ FDA ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 35 ವರ್ಷದ FDA ರುದ್ರಣ್ಣ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.
ಡೆತ್ನೋಟ್ನಲ್ಲಿ ತಹಶಿಲ್ದಾರ್ ಬಸವರಾಜ ನಾಗರಾಳ, ಮಂತ್ರಿ PA ಹೆಸರು ಬರೆದಿಟ್ಟು ರುದ್ರಣ್ನ ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರುದ್ರಣ್ನನನ್ನು ಉದ್ದೇಶ ಪೂರ್ವಕವಾಗಿ ಬೆಳಗಾವಿ ಕಛೇರಿಯಿಂದ ಸೌದತ್ತಿಗೆ ವರ್ಗಾವಣೆ ಮಾಡಲಾಗಿತ್ತು ಎನ್ನಲಾಗಿದೆ.
ಇದೀಗ ಹಿರಿಯ ಅಧಿಕಾರಿಗಳಿಂದ ಕಿರುಕುಳ ತಡೆಯಲಾರದೆ ರುದ್ರಣ್ನ ವಿಡಿಯೋ ರೆಕಾರ್ಡಿಂಗ್ ಮಾಡಿ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಖಡೇ ಬಜಾರ್ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಬಿಗ್ಬಾಸ್ ಮುಂದಿನ ಸೀಸನ್ ಇವರೇ ನಿರೂಪಣೆ ಮಾಡ್ತಾರಂತೆ..!
Post Views: 85