Download Our App

Follow us

Home » ಮೆಟ್ರೋ » ಬೆಳಗಾವಿಯಲ್ಲಿ ಮಹಿಳೆಯರ ನಗ್ನ ವಿಡಿಯೋ ಸೆರೆ ಹಿಡಿದು ಹಣಕ್ಕಾಗಿ ಬ್ಲ್ಯಾಕ್​ಮೇಲ್ – 3 ಪ್ರಕರಣಗಳು ದಾಖಲು..!

ಬೆಳಗಾವಿಯಲ್ಲಿ ಮಹಿಳೆಯರ ನಗ್ನ ವಿಡಿಯೋ ಸೆರೆ ಹಿಡಿದು ಹಣಕ್ಕಾಗಿ ಬ್ಲ್ಯಾಕ್​ಮೇಲ್ – 3 ಪ್ರಕರಣಗಳು ದಾಖಲು..!

ಬೆಳಗಾವಿ : ಮುಂಬೈ ಕ್ರೈಂ ಬ್ರ್ಯಾಂಚ್, ಗುಪ್ತಚರ ಇಲಾಖೆಯಿಂದ ಕರೆ ಮಾಡುತ್ತಿದ್ದೇವೆ ಅಂತ ವಿಡಿಯೋ ಕಾಲ್​ ಮಾಡಿ, ಮಹಿಳೆಯರ ನಗ್ನ ದೇಹವನ್ನು ರೆಕಾರ್ಡ್​ ಮಾಡಿಕೊಂಡು ಹಣಕ್ಕಾಗಿ ಬ್ಲ್ಯಾಕ್​ ಮೇಲ್​ ಮಾಡಿರುವ ಬಗ್ಗೆ ಬೆಳಗಾವಿ ಸೈಬರ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ.

ಪೊಲೀಸ್ ಕಮಿಷನರ್​ ಯಡಮಾರ್ಟಿನ್​​​ ವಂಚನೆ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಮಹಿಳೆಯರಿಗೆ ಮೇಲ್, ಮೆಸೇಜ್, ಕರೆ ಅಥವಾ ವಾಟ್ಸಪ್ ಸಂದೇಶ ಬರುತ್ತೆ. ಕೇಸ್​ವೊಂದ್ರಲ್ಲಿ ನಿಮ್ಮ ಹೆಸರಿದೆ, ಯಾಕೆ ಈ ರೀತಿ ಮಾಡಿದ್ರಿ ವಿವರಣೆ ಕೊಡ್ಬೇಕು, ನಾವೀಗ ನಿಮ್ಮನ್ನು ವಿಚಾರಣೆ ಮಾಡಬೇಕು ಕ್ಯಾಮೆರಾ ಮುಂದೆ ಬನ್ನಿ ಅಂತಾರೆ. ಹೇಗೆ ಅಪರಾಧ ಕೃತ್ಯ ಎಸಗಿದ್ದೀರಿ ಅಂಥ ನಿಮ್ಮ ದೇಹವನ್ನು ಪರಿಶೀಲಿಸಬೇಕು. ಹೀಗಾಗಿ ಬಟ್ಟೆ ಬಿಚ್ಚಿ ಅಂತಾರೆ, ನಗ್ನವಾಗಿ ಕ್ಯಾಮೆರಾ ಮುಂದೆ ಬಂದ್ರೆ ಸ್ಕ್ರೀನ್​ ರೆಕಾರ್ಡ್ ಮಾಡಿಕೊಳ್ಳುತ್ತಾರೆ. ನಂತರ, ಈ ವಿಡಿಯೋ ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್​ ಮಾಡುತ್ತಾರೆ.

ಈ ರೀತಿ ಸುಳ್ಳು ಹೇಳಿ, ಮಹಿಳೆಯರನ್ನು ನಂಬಿಸಿ ಹಣ ದೋಚುವ ಪ್ರಕರಣ ಇದೀಗ ಬೆಳಕಿಗೆ ಬಂದಿದ್ದು, ಮೂರು ಪ್ರಕರಣಗಳು ಬೆಳಗಾವಿ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.

ಇದನ್ನೂ ಓದಿ : ಚಿತ್ರದುರ್ಗ : ಮದುವೆಯಾಗಿ 2 ತಿಂಗಳಿಗೇ ಗೃಹಿಣಿ ಆತ್ಮಹ*ತ್ಯೆ..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here