Download Our App

Follow us

Home » ಮೆಟ್ರೋ » ಬೆಂಗಳೂರು : ರೈಲು ಬೋಗಿಯ ಡೆಸ್ಟ್ ಬಿನ್​ನಲ್ಲಿ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆ..!

ಬೆಂಗಳೂರು : ರೈಲು ಬೋಗಿಯ ಡೆಸ್ಟ್ ಬಿನ್​ನಲ್ಲಿ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆ..!

ದೇವನಹಳ್ಳಿ : ಭುವನೇಶ್ವರದಿಂದ ಬೆಂಗಳೂರಿಗೆ ಬಂದ ಪ್ರಶಾಂತಿ ಎಕ್ಸ್‌ಪ್ರೆಸ್ ರೈಲಿನ ಡೆಸ್ಟ್ ಬಿನ್​ನಲ್ಲಿ ನವಜಾತ ಗಂಡು ಶಿಶು ಪತ್ತೆಯಾಗಿದೆ. ಡಸ್ಟ್​ಬಿನ್​ನಲ್ಲಿಯೇ ಹಸುಗೂಸು ನರಳಿ ನರಳಿ ಪ್ರಾಣ ಬಿಟ್ಟಿದ್ದು, ಯಲಹಂಕ ರೈಲು ನಿಲ್ದಾಣದಲ್ಲಿ ನಿನ್ನೆ ಮುಂಜಾನೆ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಗಂಡು ಮಗುವನ್ನ ಬಿಳಿ ಬಟ್ಟೆಯಲ್ಲಿ ಸುತ್ತಿ ಡಸ್ಟ್ ಬಿನ್​ಗೆ ಹಾಕಲಾಗಿತ್ತು. ಯಲಹಂಕಕ್ಕೆ ರೈಲು ಬಂದ ವೇಳೆ ಡಸ್ಟ್ ಬಿನ್​ನಲ್ಲಿ ಶಿಶು ಪತ್ತೆಯಾಗಿದೆ. ಮಗು ಜನಿಸಿದ ನಾಲ್ಕೈದು ಗಂಟೆಯಲ್ಲೇ ತಾಯಿ ಮಗುವನ್ನು ಡಸ್ಟ್ ಬಿನ್​ಗೆ ಎಸೆದು ಹೋಗಿದ್ದಾರೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ.

ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಮೃತದೇಹ ಕಂಡ ಪ್ರಯಾಣಿಕರು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಯಶವಂತಪುರ ರೈಲ್ವೆ ಪೋಲಿಸರು, ಮಗುವಿನ ಮೃತದೇಹವನ್ನು ಶವಾಗಾರಕ್ಕೆ ರವಾನಿಸಿದ್ದಾರೆ. ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದು, ಸದ್ಯ ಮಗುವಿನ ಮೃತದೇಹವನ್ನು ಬೆಂಗಳೂರು ರಾಮಯ್ಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ : ಕೆಂಪೇಗೌಡ ದಿನಾಚರಣೆಗೆ ದಳಪತಿಗಳಿಗೆ ನೀಡದ ಆಹ್ವಾನ – ಮಿಸ್ಟೇಕ್ ಆಗಿದೆ ಎಂದ ಡಿಸಿಎಂ ಡಿಕೆಶಿ

 

 

 

 

Leave a Comment

DG Ad

RELATED LATEST NEWS

Top Headlines

ಅಟ್ರಾಸಿಟಿ ಕೇಸ್​​ ಇದ್ರೂ ಅರೆಸ್ಟ್ ಆಗಿಲ್ಲ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್ – FIR ಆಗಿದ್ರೂ ಸಸ್ಪೆಂಡ್‌ ಮಾಡದೆ ರಕ್ಷಣೆ ಮಾಡ್ತಿರೋದ್ಯಾಕೆ?

ಆನೇಕಲ್​​ : ಭೂ ವಿವಾದಕ್ಕೆ ಸಂಬಂಧಿಸಿದಂತೆ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್​​​ ಜೆಸಿಬಿಯನ್ನೂ ತೆಗೆದುಕೊಂಡು ಹೋಗಿ ಟಾರ್ಚರ್ ಕೊಟ್ಟಿದ್ದ ಘಟನೆಯೊಂದು ನಡೆದಿತ್ತು. ಈ ಪ್ರಕರಣಕ್ಕೆ ಮಂಜೇಶ್​​​ ವಿರುದ್ದ

Live Cricket

Add Your Heading Text Here