ಬೆಂಗಳೂರು : ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಉಳಿದಿರುವಾಗ ಬೆಂಗಳೂರಿನಲ್ಲಿ ಐಟಿ ದಾಳಿ ನಡೆದಿದೆ. ನಗರದ 60ಕ್ಕೂ ಹೆಚ್ಚು ಕಡೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚುನಾವಣೆಗೆ ಹಣ ಸಾಗಾಟ ಆರೋಪ ಹಿನ್ನೆಲೆ ಐಟಿ ಅಧಿಕಾರಿಗಳು ಜಯನಗರ , ವಿಜಯನಗರ, ಬನಶಂಕರಿ, ಆರ್.ಟಿ.ನಗರ, ಮಾಳಾಗಾಳ, ಪೀಣ್ಯ ಇಂಡಸ್ಟ್ರೀಯಲ್ ಏರಿಯಾ ಸೇರಿ ಹಲವು ಕಡೆ ದಾಳಿ ನಡೆಸಿದ್ದಾರೆ.
ಬೆಳಗ್ಗೆ 6.30 ರಿಂದಲೇ ತಪಾಸಣೆ ನಡೆಸುತ್ತಿರುವ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ನಾಗರಾಬಾವಿ ಎರಡನೇ ಹಂತದ ಮಾಳಾಗಾಳಾದಲ್ಲಿರುವ ರೇಣಕಯ್ಯ ಎಂಬ ಇಂಡಸ್ಟ್ರೀಯಲಿಸ್ಟ್ ಮನೆ ಮೇಲೆ ದಾಳಿ ಮಾಡಿ ತಪಾಸಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬಿ.ಎಂ ಗಿರಿರಾಜ್ ನಿರ್ದೇಶನದ ಹೊಸ ಸಿನಿಮಾದ ಶೀರ್ಷಿಕೆ ರಿಲೀಸ್ : ಚಿತ್ರತಂಡಕ್ಕೆ ಶುಭ ಹಾರೈಸಿದ ಧ್ರುವ ಸರ್ಜಾ..!
Post Views: 75