ಬೆಂಗಳೂರು : ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಓರ್ವ ಯುವಕ ಸಾವನ್ನಪ್ಪಿರೋ ಘಟನೆ ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್ನಲ್ಲಿ ನಡೆದಿದೆ. ಮೂವರು ಯುವಕರು ಒಂದೇ ಬೈಕ್ನಲ್ಲಿ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಕಳೆದ ವರ್ಷದ ಹಿಂದೆ ಇದೇ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ವೇಳೆ ಕಾರ್ಮಿಕ ಸಾವನ್ನಪ್ಪಿದ್ದ. ಇದೀಗ ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಕೂಡಲೇ ಸ್ಥಳೀಯರು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸ್ ದಾಖಲಿಸಿದ್ದಾರೆ.
20 ವರ್ಷದ ಸದ್ದಾಂ ಪಾಷ ಮೃತ ಯುವಕ, ಗಂಭೀರ ಗಾಯಗೊಂಡವರನ್ನು ಉಮ್ರಾನ್ ಪಾಷ ಹಾಗೂ ಮುಬಾರಕ್ ಎಂದು ಗುರುತಿಸಲಾಗಿದೆ. ಇನ್ನು, ಗುಂಡಿ ಪಕ್ಕ ಯಾವುದೇ ಬ್ಯಾರಿಕೇಡ್ ಅಳವಡಿಸದಿರೋದು ಈ ಘಟನೆಗೆ ಕಾರಣ ಎಂದು ಸ್ಥಳೀಯರು ಅಕ್ರೋಶ ಹೊರ ಹಾಕುತ್ತಿದ್ದಾರೆ.
ಇದನ್ನೂ ಓದಿ : ಇಂದು ಹಿರಿಸಾವೆಯಲ್ಲಿರುವ ಫಾರ್ಮ್ ಹೌಸ್ನಲ್ಲಿ ಸೌಂದರ್ಯ ಜಗದೀಶ್ ಅಂತ್ಯಕ್ರಿಯೆ..!