ಬೆಂಗಳೂರು : ನಗರದ ಗಂಗಮ್ಮನ ಗುಡಿ ಪ್ರದೇಶದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 22 ವರ್ಷದ ಪೂಜಾ ಆತ್ಮಹತ್ಯೆ ಶರಣಾದ ಯುವತಿ ಎಂದು ತಿಳಿದು ಬಂದಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಹಾಕ್ಕೊಂಡು ಪೂಜಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೂಜಾ ಮೂಲತಃ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ತೆಗ್ಗಿ ಬಸಾಪುರದವರಾಗಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಗೆ ಪೂಜಾ ಮೃತದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಗಂಗಮ್ಮನ ಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 2022ರಲ್ಲಿ ಪೋಷಕರು ಸುನಿಲ್-ಪೂಜಾ ವಿವಾಹ ಮಾಡಿದ್ದರು. ಪೂಜಾ ಪತಿ ಸುನಿಲ್, ಮೈದುನ ಅನಿಲ್ ವಿರುದ್ದ ಯುವತಿ ಪೋಷಕರ ಇದೀಗ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ಉಡುಪಿಯಲ್ಲಿ ಭಾರಿ ಮಳೆಗೆ ಮತ್ತೊಂದು ಬಲಿ – ಮನೆಯ ಮೇಲೆ ಮಣ್ಣು ಕುಸಿದು ಮಹಿಳೆ ಸಾ*ವು..!
Post Views: 231