Download Our App

Follow us

Home » ಅಪರಾಧ » ಬೆಂಗಳೂರು : ಆಟೋ ಬುಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಚಾಲಕ..!

ಬೆಂಗಳೂರು : ಆಟೋ ಬುಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಚಾಲಕ..!

ಬೆಂಗಳೂರು : ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ದುಂಡಾವರ್ತನೆ ತೋರಿರುವ ಘಟನೆ ನಡೆದಿದೆ. ಮಹಿಳಾ ಪ್ರಯಾಣಿಕರ ಜೊತೆ ಆಟೋ ಚಾಲಕ ಅನುಚಿತವಾಗಿ ವರ್ತಿಸಿ ಹಲ್ಲೆ ಮಾಡಿರುವ ಘಟನೆ ನಗರದ ಬೆಳ್ಳಂದೂರಿನಲ್ಲಿ ನಡೆದಿದೆ.

ವೈಟ್ ಫೀಲ್ಡ್ ನ ತುಬರಹಳ್ಳಿಗೆ ತೆರಳಲು ಮಹಿಳೆ ಆಟೋ ಬುಕ್ ಮಾಡಿದ್ದರು. ಆಟೋ ಸ್ಥಳಕ್ಕೆ ಬಂದ ನಂತರ ಬುಕಿಂಗ್ ಕ್ಯಾನ್ಸಲ್ ಮಾಡಿದ್ದು, ಈ ವೇಳೆ ಆಟೋ ಚಾಲಕ ಮಹಿಳೆ ಜೊತೆ ಗಲಾಟೆ ಮಾಡಿ ರಸ್ತೆಯಲ್ಲಿ ಎಳೆದಾಡಿ ಹಲ್ಲೆ ಮಾಡಿದ್ದಾನೆ.

ಆಟೋ ಚಾಲಕನ ದುಂಡಾವರ್ತನೆಯಿಂದಾಗಿ ಮಹಿಳೆ ರಸ್ತೆಗೆ ಬಿದ್ದಿದ್ದಾರೆ. ಈ ಘಟನೆ ನಿನ್ನೆ ಬೆಳಗ್ಗೆ 8.30ರ ಸುಮಾರಿಗೆ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸದ್ಯ ಮಹಿಳೆ ಯಾವುದೇ ದೂರು ದಾಖಲಿಸದೆ ಊರಿಗೆ ತೆರಳಿದ್ದು, ಮಹಿಳೆಯ ಸ್ನೇಹಿತ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಪೊಲೀಸರಿಗೆ ದೂರು ನೀಡಿದ್ದಾನೆ. ದೂರು ಪಡೆದು ಆಟೋ ಚಾಲಕನಿಗಾಗಿ ಪೊಲೀಸರ ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಮಾಜಿ ಸಿಎಂ ಬಿಎಸ್​ವೈ ನಿವಾಸಕ್ಕೆ ಭೇಟಿ ನೀಡಿದ ಹೆಚ್.​ಡಿ ಕುಮಾರಸ್ವಾಮಿ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಿಗೆ ನಾಯಿ ಮಾಂಸ ರವಾನೆ ಆರೋಪ : ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮಾ – ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುನೀತ್ ಕೆರೆಹಳ್ಳಿ ಅರೆಸ್ಟ್..!

ಬೆಂಗಳೂರು : ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ

Live Cricket

Add Your Heading Text Here