ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನಲೆ ರಾಜ್ಯಾದ್ಯಂತ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ಇದೀಗ ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಬಿಲ್ಡರ್ಗಳು ಮತ್ತು ಉದ್ಯಮಿಗಳ ಮನೆಗೆ ರೇಡ್ ಮಾಡಿ ಬಿಗ್ ಶಾಕ್ ನೀಡಿದ್ದಾರೆ.
ಬಿಲ್ಡರ್‌ಗಳ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿ ಮುಂಜಾನೆಯಿಂದಲೂ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಬೆಂಗಳೂರಿನ ಕೆಆರ್ ಪುರಂ, ಕೊಡಿಗೇಹಳ್ಳಿ ಸೇರಿ ಹಲವು ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ನಂಜುಂಡೇಶ್ವರ ಇನ್ಫ್ರಾಸ್ಟ್ರಕ್ಚರ್ ಪ್ರೈವೆಟ್ ಲಿಮಿಟೆಡ್ ಸೇರಿದಂತೆ ಹಲವು ಬಿಲ್ಡರ್ ಕಚೇರಿ, ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು ಎಲೆಕ್ಷನ್ ಹೊತ್ತಲ್ಲಿ ಹಣ ಹರಿದಾಟದ ಮಾಹಿತಿ ಸಿಕ್ಕಿ ಆದಾಯ ತೆರಿಗೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರಾ ಎಂಬ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.
ಇದನ್ನೂ ಓದಿ : ಬೆಂಗಳೂರಲ್ಲಿ ಕೇರಳ ಮೂಲದ ಡ್ರಗ್ ಪೆಡ್ಲರ್ಸ್ ಅರೆಸ್ಟ್ – 10.20 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ..!