ಬೆಂಗಳೂರು : ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಭುದ್ಯಾ ಎಂಬ ಯುವತಿ ಅನುಮಾನಾಸ್ಪದವಾಗಿ ಮೇ 15ರಂದು ಮೃತಪಟ್ಟಿದ್ದಳು. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುದ್ಯಾ, ಮಧ್ಯಾಹ್ನ ಮನೆಯ ಬಾತ್ ರೂಂನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಆಕೆಯ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು.
ಪೊಲೀಸರು ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಅಂತಾ ಪರಿಗಣಿಸಿದ್ದರು. ಆದರೆ ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಇದು ಆತ್ಮಹತ್ಯೆ ಅಲ್ಲವೇ ಅಲ್ಲ, ಕೊಲೆ ಎಂದು ಪ್ರಭುದ್ಯಾ ತಾಯಿ ದೂರು ನೀಡಿದ್ದಾರೆ. ಈ ಹಿನ್ನಲೆ ಸುಬ್ರಮಣ್ಯ ಪುರ ಠಾಣೆ ಪೊಲೀಸರು 302 ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಭುದ್ಯಾ ತಾಯಿ ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ನನ್ನ ಮಗಳನ್ನ ಕ್ರೂರವಾಗಿ ಕೊಲೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಕತ್ತು ಮತ್ತು ಕೈಯನ್ನು ಚಾಕುವಿನಿಂದ ಕೊಯ್ಯಲಾಗಿತ್ತು. ಮುಖಕ್ಕೆ ಮತ್ತು ತಲೆಯ ಹಿಂಭಾಗಕ್ಕೆ ಬಲವಾಗಿ ಹೊಡೆಯಲಾಗಿದೆ. ನನ್ನ ಮಗಳದ್ದು ಕೊಲೆ ಎಂದು ದೂರು ದಾಖಲಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿ ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ಮಾಡುತ್ತಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ಮುಂದುವರೆದ ಮಳೆ ಆರ್ಭಟ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ..!