ಬೆಂಗಳೂರು : ಪ್ರೇಮ ವೈಫಲ್ಯಕ್ಕೆ ಮನನೊಂದು ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಸೋಲದೇವನಹಳ್ಳಿಯಲ್ಲಿ ನಡೆದಿದೆ. 25 ವರ್ಷದ ಲಿಖಿತಾ ಮೃತ ದುರ್ದೈವಿ.
ಲಿಖಿತಾ ಬಿಹಾರಿ ಮೂಲದ ಯುವಕನನ್ನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದಳು. ಇಬ್ಬರ ಪ್ರೇಮ ಚನ್ನಾಗಿಯೇ ಇತ್ತು. ಆದರೆ ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗಾಗಿ ಲವ್ ಬ್ರೇಕ್ ಅಪ್ ಆಗಿತ್ತು. ಇದರಿಂದ ಲಿಖಿತಾ ಮನನೊಂದಿದ್ದಳು. ಸಾಯುವ ಮಾತಗಳನ್ನಾಡುತ್ತಿದ್ದಳು. ವಾರದ ಹಿಂದಷ್ಟೇ ಪಶ್ಚಿಮ ಬಂಗಾಳದಿಂದ ಬೆಂಗಳೂರಿಗೆ ಬಂದಿದ್ದಳು. ಒಂದು ವಾರದಿಂದ ಸೋಲದೇವನಹಳ್ಳಿಯ ಸಹೋದರಿಯ ನಿವಾಸದಲ್ಲಿ ವಾಸವಿದ್ದಳು.
ನಿನ್ನೆ ಮನೆಯಿಂದ ಹೊರಗೆ ಹೋಗಿದ್ದ ಲಿಖಿತಾ ವಾಪಸ್ಸು ಮನೆಗೆ ಬಂದಿರಲಿಲ್ಲ. ಅನುಮಾನಗೊಂಡು ಪೊಲೀಸರಿಗೆ ದೂರು ನೀಡಿ ಪರಿಶೀಲನೆ ನಡೆಸಿದಾಗ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ನಿಖಿತ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಯಶವಂತಪುರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕೊಡಗು : ಮೊಬೈಲ್ನಲ್ಲಿ ಮಾತನಾಡುತ್ತಿದ್ದಾಗಲೇ ಹೃದಯಾಘಾತವಾಗಿ ಉದ್ಯಮಿ ಸಾವು..!