ನಟ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಒಂದು ವಾರದ ಒಳಗೆ ಅವರು ಚಿಕಿತ್ಸೆಯ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಮಾಡಬೇಕಿದೆ. ಈಗಾಗಲೇ ಜಾಮೀನು ಪಡೆದು 2 ದಿನ ಕಳೆದಿದ್ದು, ಇಂದು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದರ್ಶನ್ ಆಗಮಿಸಿರುವ ಕಾರಣದಿಂದ ಆಸ್ಪತ್ರೆಗೆ ಹೊರಗೆ ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ನೆರೆದಿದ್ದಾರೆ. ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.
ದರ್ಶನ್ಗಾಗಿ ಆಸ್ಪತ್ರೆಯಲ್ಲಿ ಸ್ಪೆಷಲ್ ವಾರ್ಡ್ಗಿಂತಲೂ ಸೂಟ್ ರೂಮ್ ಬುಕ್ ಮಾಡಲಾಗಿದ್ದು, ಫ್ಯಾಮಿಲಿ ಸಹಿತ ಉಳಿದುಕೊಳ್ಳಬಹುದಾದ ಸಪರೇಟ್ ಸೂಟ್ ಆಗಿದೆ. ನಾಲ್ಕು ತಿಂಗಳ ಬಳಿಕ ಜೈಲಿನಿಂದ ಹೊರಗೆ ಬಂದಿರುವ ದರ್ಶನ್ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿರುವುದರಿಂದ ಬಿಜಿಎಸ್ ಆಸ್ಪತ್ರೆಯ ಬಳಿ ಕೆಂಗೇರಿ ಠಾಣೆ ಪೊಲೀಸರಿಂದ ಬಂದೋಬಸ್ತ್ ಮಾಡಲಾಗಿದೆ.
2013ರಲ್ಲೂ ಬೆನ್ನುನೋವಿನ ಚಿಕಿತ್ಸೆಗೆ ದರ್ಶನ್ ಅವರು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ‘ಬೃಂದಾವನ’ ಸಿನಿಮಾದ ಶೂಟಿಂಗ್ ವೇಳೆ ಕುದುರೆ ಮೇಲಿಂದ ಬಿದ್ದಿದ್ದರಿಂದ ಅವರಿಗೆ ನೋವು ಕಾಣಿಸಿಕೊಂಡಿತ್ತು. ಆಗಲೂ ಇದೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಈಗ ಪತ್ನಿ ವಿಜಯಲಕ್ಷ್ಮಿ ಹಾಗೂ ಸ್ನೇಹಿತ ಧನ್ವೀರ್ ಜೊತೆ ದರ್ಶನ್ ಅವರು ಆಸ್ಪತ್ರೆಗೆ ಬಂದಿದ್ದಾರೆ.
ಇದನ್ನೂ ಓದಿ : ಮಗಳ ಜೊತೆ ದೀಪಾವಳಿ ಫೋಟೋಶೂಟ್ ಮಾಡಿಸಿಕೊಂಡ ಅದಿತಿ ಪ್ರಭುದೇವ ದಂಪತಿ..!