Download Our App

Follow us

Home » ಜಿಲ್ಲೆ » ಶೃಂಗೇರಿ ಭಾರತೀತೀರ್ಥ ಸ್ವಾಮೀಜಿ ಸನ್ಯಾಸ ದೀಕ್ಷೆ ಸ್ವೀಕರಿಸಿ 50 ವರ್ಷ : ಅ.26ರಂದು ಮಹಾಭಿಯಾನ ಕಾರ್ಯಕ್ರಮ..!

ಶೃಂಗೇರಿ ಭಾರತೀತೀರ್ಥ ಸ್ವಾಮೀಜಿ ಸನ್ಯಾಸ ದೀಕ್ಷೆ ಸ್ವೀಕರಿಸಿ 50 ವರ್ಷ : ಅ.26ರಂದು ಮಹಾಭಿಯಾನ ಕಾರ್ಯಕ್ರಮ..!

ಬೆಂಗಳೂರು : ವೇದಾಂತಭಾರತಿಯ ಮಹಾಸಂರಕ್ಷಕರು, ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಭಾರತೀತೀರ್ಥ ಮಹಾಸ್ವಾಮೀಜಿ ಅವರು ಸನ್ಯಾಸ ದೀಕ್ಷೆ ಸ್ವೀಕರಿಸಿ 50ನೇ ವರ್ಷದ ಸ್ಮರಣಾರ್ಥ ಅ.26ರಂದು ನಗರದ ಅರಮನೆ ಮೈದಾನದಲ್ಲಿ ಕಲ್ಯಾಣವೃಷ್ಟಿಸ್ತವ ಮಹಾಭಿಯಾನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್​ಕರ್ ಭಾಗವಹಿಸಲಿದ್ದಾರೆ.

ಕಲ್ಯಾಣವೃಷ್ಟಿಸ್ತವ ಮಹಾಭಿಯಾನದಲ್ಲಿ, ಉಪರಾಷ್ಟ್ರಪತಿಯವರು ವೇದಾಂತಭಾರತಿಯು ಗ್ರಂಥಮಾಲೆಯ ಪುಸ್ತಕವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಮತ್ತು ಕಾರ್ಯಕ್ರಮದ ಸ್ವಾಗತಸಮಿತಿಯ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ವಿ. ಸೋಮಣ್ಣ ಮತ್ತಿತರ ಗಣ್ಯರು ಪಾಲ್ಗೊಳ್ಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ವೇದಾಂತ ಭಾರತಿ ಸಂಸ್ಥೆಯು, ಸುವರ್ಣಭಾರತೀ ಶೀರ್ಷಿಕೆಯಡಿ ಮಿಥಿಕ್ ಸೊಸೈಟಿ ಆಶ್ರಯದಲ್ಲಿ ವೇದಾಂತಭಾರತೀ, ಶಾಂಕರ ತತ್ತ್ವಪ್ರಸಾರಕ್ಕಾಗಿ ರಾಜ್ಯಾದ್ಯಂತ ಕಲ್ಯಾಣವೃಷ್ಟಿ ಅಭಿಯಾನವನ್ನು ಹಮ್ಮಿಕೊಂಡಿದೆ. ಶ್ರೀ ಶಂಕರಭಗವತ್ಪಾದರು ರಚಿಸಿದ ಕಲ್ಯಾಣವೃಷ್ಟಿಸ್ತವ, ಶಿವಪಂಚಾಕ್ಷರ, ನಕ್ಷತ್ರಮಾಲಾಸ್ತೋತ್ರ ಹಾಗೂ ಲಕ್ಷ್ಮೀನೃಸಿಂಹಕರುಣಾರಸಸ್ತೋತ್ರ ಎಂಬ ಮೂರು ಸ್ತೋತ್ರಗಳನ್ನು ಹೇಳಿಕೊಡಲಾಗುತ್ತಿದೆ. ವೇದಾಂತಭಾರತಿಯ ಸಂರಕ್ಷಕರಾದ ಶಂಕರಭಾರತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಈಗಾಗಲೇ ಬೆಂಗಳೂರಿನ ಸಹಸ್ರಾರು ಪಾರಾಯಣಕೇಂದ್ರಗಳು ಹಾಗೂ ವಿದ್ಯಾಸಂಸ್ಥೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚಿನ ಜನರಿಗೆ ಈ ಸ್ತೋತ್ರಗಳನ್ನು ಅಭ್ಯಾಸ ಮಾಡಿಸಲಾಗಿದೆ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಈ ಕಲ್ಯಾಣವೃಷ್ಟಿಸ್ತವ ಮಹಾಭಿಯಾ ಶನಿವಾರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣವಿಹಾರದಲ್ಲಿ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ವಿಧುಶೇಖರಭಾರತೀ ಸ್ವಾಮೀಜಿ ಸಮ್ಮುಖದಲ್ಲಿ ನಡೆಯಲಿದೆ. ಯಡತೊರೆ ಮಠದ ಶಂಕರಭಾರತೀ ಮಹಾಸ್ವಾಮೀಜಿ, ಬ್ರಹ್ಮಾನಂದಭಾರತೀ ಸ್ವಾಮೀಜಿ ಉಪಸ್ಥಿತಿಯಲ್ಲಿ ವಿದ್ಯಾರ್ಥಿಗಳು, ಪೌರ ಕಾರ್ಮಿಕರು, ದಿವ್ಯಾಂಗರು, ಹಿರಿಯ ನಾಗರಿಕರು ಹಾಗೂ ರಾಜ್ಯದ ಬೇರೆ ಬೇರೆ ಊರುಗಳಿಂದ ಆಗಮಿಸುವ ಪಾರಾಯಣಕರ್ತರು ಸೇರಿದಂತೆ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ : ಬಿಗ್ ಬಾಸ್‌ಗೆ ಗುಡ್ ಬೈ.. ದೊಡ್ಮನೆಯಿಂದ ಹೊರ ಬಂದ ಜಗದೀಶ್‌ ಹೇಳಿದ್ದೇನು?

Leave a Comment

DG Ad

RELATED LATEST NEWS

Top Headlines

ನಟ ದರ್ಶನ್​ಗೆ ನಾಳೆ ನಿರ್ಣಾಯಕ ದಿನ – ಏನಾಗಲಿದೆ ಬೇಲ್ ಭವಿಷ್ಯ?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿರುವ ನಟ ದರ್ಶನ್​​ಗೆ ನಾಳೆ ನಿರ್ಣಾಯಕ ದಿನವಾಗಿದೆ. ಮಧ್ಯಂತರ ಜಾಮೀನು ಪಡೆದು ಜೈಲಿಂದ ಹೊರಗೆ ಬಂದಿರುವ ನಟ ದರ್ಶನ್ ಸದ್ಯ

Live Cricket

Add Your Heading Text Here